ಶಾಲಾ ಮಕ್ಕಳಿಗೆ ಸ್ವೆಟರ್ ಹಂಚಿಕೆ ವಿಚಾರದಲ್ಲಿ ಭ್ರಷ್ಟಾಚಾರ: ನಟ ಕೋಮಲ್ ವಿರುದ್ಧ ದಲಿತ ಸಂಘರ್ಷ ಸಮಿತಿ ಆರೋಪ

ನಟ ಕೋಮಲ್ ಅವರು ಶಾಲಾ ಮಕ್ಕಳ ಸ್ವೆಟರ್ ಹಂಚಿಕೆ ವಿಚಾರದಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆಂಬ ಆರೋಪ ಕೇಳಿ ಬಂದಿದೆ. 
ನಟ ಕೋಮಲ್ ವಿರುದ್ಧ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸುತ್ತಿರುವುದು
ನಟ ಕೋಮಲ್ ವಿರುದ್ಧ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸುತ್ತಿರುವುದು

ಬೆಂಗಳೂರು: ನಟ ಕೋಮಲ್ ಅವರು ಶಾಲಾ ಮಕ್ಕಳ ಸ್ವೆಟರ್ ಹಂಚಿಕೆ ವಿಚಾರದಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆಂಬ ಆರೋಪ ಕೇಳಿ ಬಂದಿದೆ. 

ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ನಟ ಕೋಮಲ್ ವಿರುದ್ಧ ಆರೋಪ ಮಾಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ನಗರದಲ್ಲಿ ನಿನ್ನೆ ಬಿಬಿಎಂಪಿ ಕಚೇರಿ ಮುಂಭಾಗ ಸಮಿತಿ ಅಧ್ಯಕ್ಷ ಡಾ.ಸಿ.ಎಸ್.ರಘು ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಸ್ವೆಟರ್‍ಗಳನ್ನು ಮಾರಾಟ ಮಾಡಿ ಆಕ್ರೋಶ ಹೊರಹಾಕಿದರು.

ಈ ವೇಳೆ ಮಾತನಾಡಿರುವ ಸಿಎಸ್ ರಘು ಅವರು, ಪಾಲಿಕೆ ಶಾಲಾ, ಕಾಲೇಜುಗಳಲ್ಲಿ ದಲಿತ, ಹಿಂದುಳಿದ ಮತ್ತು ಕಡು ಬಡವ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಶಿಕ್ಷಣ ಪಡೆಯುತ್ತಿದ್ದಾರೆ. 2020-21ನೆ ಸಾಲಿನಲ್ಲಿ ಪಾಲಿಕೆ ಮಕ್ಕಳಿಗೆ ಸ್ವೆಟರ್‍ಗಳನ್ನು ನೀಡಲು ಅನುದಾನ ಮೀಸಲು ಇಟ್ಟಿರುತ್ತಾರೆ. ಆದರೆ, ಪಾಲಿಕೆಯ ಕೆಲ ಅಧಿಕಾರಿಗಳು ಟೆಂಡರ್ ಕರೆಯದೇ 4ಜಿ ವಿನಾಯಿತಿ ಪಡೆದು ಕರ್ನಾಟಕ ಕೈಮಗ್ಗ ನಿಗಮಕ್ಕೆ ಸ್ವೆಟರ್‍ಗಳನ್ನು ಸರಬರಾಜು ಮಾಡಲು ಆದೇಶ ನೀಡಿದ್ದಾರೆ. 

ಕಳೆದ ಸಾಲಿನಲ್ಲಿ ಕೊರೋನ ಸಾಂಕ್ರಮಿಕ ರೋಗದ ಕಾರಣದಿಂದ ಶಾಲಾ, ಕಾಲೇಜು ಬಂದ್ ಮಾಡಲಾಗಿತ್ತು. ಆದರೆ, ಸ್ವೆಟರ್‍ಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ ಎಂದು 1.76 ಕೋಟಿ ರೂ.ಹಣವನ್ನು ಪಾವತಿ ಮಾಡಲಾಗಿದೆ. ಅಂದಾಜು 16 ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ಸ್ವೆಟರ್‍ಗಳನ್ನು ವಿತರಣೆ ಮಾಡದೇ ಈ ಯೋಜನೆಯಲ್ಲಿ ಪಾಲಿಕೆ ಅಧಿಕಾರಿಗಳು ಹಣವನ್ನು ಲೂಟಿ ಮಾಡಿದ್ದಾರೆಂದು ಆರೋಪಿಸಿದರು.

ಶ್ರೀಮಂತರ ಮಕ್ಕಳಂತೆ ನಮ್ಮ ಪಾಲಿಕೆ ಶಾಲಾ, ಕಾಲೇಜು ಮಕ್ಕಳು ಮಳೆ, ಚಳಿಯಿಂದ ರಕ್ಷಣೆ ಪಡೆಯಬೇಕು ಮತ್ತು ಶಿಸ್ತುನಿಂದ ಕಾಣಬೇಕು ಎಂದು ಸೈಟರ್‍ಗಳ ಯೋಜನೆ ಆದರೆ ಅಧಿಕಾರಿಗಳ ಧನದಾಹದಿಂದ ಯೋಜನೆ ಹಳ್ಳ ಹಿಡಿದಿದೆ. ಸ್ವೆಟರ್ ಖರೀದಿ ಯೋಜನೆಯಲ್ಲಿ ಭ್ರಷ್ಟಾಚಾರವೆಸಗಿದ ಅಧಿಕಾರಿಗಳನ್ನು ಅಮಾನತು ಮಾಡಲು ತಮಟೆ ಚಳುವಳಿ ಹಾಗೂ ಸ್ವೆಟರ್ ಖರೀದಿ ಅವ್ಯವಹಾರದ ಸೂಕ್ತ ತನಿಖೆ ಮಾಡಲು ಸ್ವೆಟರ್‍ಗಳ ಮಾರಾಟ ಮಾಡಿ ಬಂದ ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಮರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com