ಮೈಸೂರು: ಲಲಿತಾದ್ರಿಪುರ ಹೊರವಲಯದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್; ಪೊಲೀಸರ ತನಿಖೆ

ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. 

ಸ್ನೇಹಿತನ ಜೊತೆ ವಿದ್ಯಾರ್ಥಿನಿ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದಾಳೆ. ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ನಿರ್ಜನ ಪ್ರದೇಶಕ್ಕೆ ನಿನ್ನೆ ಸಂಜೆ ಇಬ್ಬರು ತೆರಳಿದ್ದಾರೆ. 

ಈ ವೇಳೆ ಅಲ್ಲಿಗೆ ಬಂದ 6 ಮಂದಿ ದುಷ್ಕರ್ಮಿಗಳು ಯುವಕನಿಗೆ ಹಲ್ಲೆ ಮಾಡಿ ನಂತರ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಹೇಳಲಾಗಿದೆ. 

ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅತ್ಯಾಚಾರದ ಬಳಿಕ ವಿದ್ಯಾರ್ಥಿನಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. 

ಈ ಸಂಬಂಧ ಆಲನಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com