ಶಾಲಾ-ಕಾಲೇಜು ಭೌತಿಕ ತರಗತಿ ಆರಂಭ; 2ನೇ ದಿನ ಶೇ.60ರಷ್ಟು ಮಕ್ಕಳು ಹಾಜರು

ರಾಜ್ಯದ 26 ಜಿಲ್ಲೆಗಳಲ್ಲಿ ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳು ಆರಂಭವಾದ ಎರಡನೇ ದಿನ ವಿದ್ಯಾರ್ಥಿಗಳ ಹಾಜರಾತಿಯಲ್ಲಿ ಭರ್ಜರಿ ಏರಿಕೆ ಕಂಡುಬಂದಿದ್ದು, ಶೇ.60 ದಾಟಿದೆ ಎಂದು ತಿಳಿದುಬಂದಿದೆ.
ಶಾಲೆಗೆ ಭೇಟಿ ನೀಡಿರುವ ಸಿಎಂ ಬೊಮ್ಮಾಯಿ (ಸಂಗ್ರಹ ಚಿತ್ರ)
ಶಾಲೆಗೆ ಭೇಟಿ ನೀಡಿರುವ ಸಿಎಂ ಬೊಮ್ಮಾಯಿ (ಸಂಗ್ರಹ ಚಿತ್ರ)

ಬೆಂಗಳೂರು: ರಾಜ್ಯದ 26 ಜಿಲ್ಲೆಗಳಲ್ಲಿ ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳು ಆರಂಭವಾದ ಎರಡನೇ ದಿನ ವಿದ್ಯಾರ್ಥಿಗಳ ಹಾಜರಾತಿಯಲ್ಲಿ ಭರ್ಜರಿ ಏರಿಕೆ ಕಂಡುಬಂದಿದ್ದು, ಶೇ.60 ದಾಟಿದೆ ಎಂದು ತಿಳಿದುಬಂದಿದೆ.

ಈ ಕುರಿತು ಸಚಿವ ಸಿಬಿ ನಾಗೇಶ್ ಅವರು ಮಾಹಿತಿ ನೀಡಿದ್ದು, ಭೌತಿಕ ತರಗತಿ ಆರಂಭವಾದ ಮೊದಲ ದಿನ ಶೇ.51ರಷ್ಟು ಮಕ್ಕಳು ಹಾಜರಾಗಿದ್ದರು. ಎರಡನೇ ದಿನ ಶೇ.60ರಷ್ಟು ಮಕ್ಕಳು ಹಾಜರಾಗಿದ್ದಾರೆ. ‘ಬೇಸಿಗೆ ರಜೆ ಬಳಿಕ ಶಾಲೆ ಆರಂಭದ ಮೊದಲ ದಿನ ಹಾಜರಾತಿ ಕಡಿಮೆಯೇ ಇರುತ್ತದೆ. ಆದರೆ, ಕೋವಿಡ್-19 ಸಾಂಕ್ರಾಮಿಕ ಸಂದರ್ಭದಲ್ಲಿ ರಾಜ್ಯದಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕೆಲ ಜಿಲ್ಲೆಗಳಲ್ಲಿ ಗರಿಷ್ಠ ಶೇ.76ಕ್ಕೂ ಹೆಚ್ಚಿದೆ. ಒಟ್ಟಾರೆ ವಿದ್ಯಾರ್ಥಿಗಳ ಹಾಜರಾತಿ ಶೇ.41ಕ್ಕೂ ಹೆಚ್ಚಿದೆ. ಇದು ಆಶಾದಾಯಕ ಬೆಳವಣಿಗೆ. ಮುಂಬರುವ ದಿನಗಳಲ್ಲಿ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಜರಾಗುವ ನಿರೀಕ್ಷೆ ಇದೆ’ ಎಂದು ಹೇಳಿದರು.

ಕೋವಿಡ್‌ನಿಂದಾಗಿ ಭೌತಿಕ ಶಿಕ್ಷಣದಿಂದ ಮಕ್ಕಳು ವಂಚಿತರಾಗಿರುವ ಬೇಸರ ನನ್ನನ್ನು ಕಾಡುತ್ತಿತ್ತು. ಅಲ್ಲದೇ, ಮಕ್ಕಳು ಮನೆಯಲ್ಲೇ ಇದ್ದು ಮಾನಸಿಕವಾಗಿಯು ಕುಗ್ಗುತ್ತಿದ್ದಾರೆ ಎನಿಸಿತು. ಈ ಎಲ್ಲ ಕಾಯುವಿಕೆ ಅಂತ್ಯವಾಗಿದೆ. ತರಗತಿಗಳ ಆರಂಭದೊಂದಿಗೆ ನವ ಯುಗ ಆರಂಭವಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ನಿರ್ವಹಣೆಯ ಸಂಘದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಅವರು ಮಾತನಾಡಿ, ನಗರಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಹಾಜರಾತಿ ಸುಧಾರಿಸುತ್ತಿದೆ. ತರಗತಿಗಳು ಹೀಗೆಯೇ ಮುಂದುವರೆದಿದ್ದೇ ಆದರೆ, ಸ್ಥಿರತೆ ಗಳಿಸಬಹುದು ಎಂದು ಹೇಳಿದ್ದಾರೆ. 

ಪ್ರಥಮ ಪಿಯು ಪ್ರವೇಶಕ್ಕೆ ಸೀಟುಗಳ ಕೊರತೆಯಿಲ್ಲ: ಸಚಿವ ನಾಗೇಶ್
ರಾಜ್ಯದ ಕಾಲೇಜುಗಳಲ್ಲಿ ಪ್ರಥಮ ಪಿಯುಗೆ 12 ಲಕ್ಷಕ್ಕೂ ಅಧಿಕ ಸೀಟುಗಳಿವೆ. ಈ ವರ್ಷ ಎಸ್.ಎಸ್.ಎಲ್.ಸಿ ಪಾಸ್ ಆಗಿರುವುದು 8.75 ಲಕ್ಷ ವಿದ್ಯಾರ್ಥಿಗಳು. ಅದರಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಐಟಿಐ, ಡಿಪ್ಲೋಮಾ ಸೇರಿದಂತೆ ಇನ್ನಿತರ ಕೋರ್ಸ್‌ಗಳ ಕಡೆಗೆ ಹೋಗುತ್ತಾರೆ. ಸೀಟುಗಳ ಕೊರತೆ ಆಗಬಹುದು ಎನ್ನಲಾದ ರಾಜ್ಯದ 21 ಪ್ರದೇಶಗಳಲ್ಲಿನ ಕಾಲೇಜುಗಳಲ್ಲಿ ಲಭ್ಯವಿರುವ ಪಿಯು ಸೀಟುಗಳಿಗಿಂತ ಎಸ್.ಎಸ್.ಎಲ್.ಸಿ ಪಾಸ್ ಆಗಿರುವ ವಿದ್ಯಾರ್ಥಿಗಳು ಹೆಚ್ಚಾಗಿದ್ದಾರೆ ಎಂಬುದು ಅಂಕಿ-ಅಂಶಗಳ ಪರಿಶೀಲನೆಯಿಂದ ಕಂಡು ಬಂದಿದೆ. ಈ 21 ಪ್ರದೇಶಗಳ ಕಾಲೇಜುಗಳಲ್ಲಿ ಆಗುತ್ತಿರುವ ಹೊಸ ಪ್ರವೇಶಾತಿಯನ್ನು ಮಾನಿಟರ್ ಮಾಡುತ್ತಿದ್ದೇವೆ. ಪ್ರವೇಶಾತಿ ಹೆಚ್ಚಾಗುತ್ತಿದೆ ಎಂಬುದು ಗೊತ್ತಾದರೆ ಕೂಡಲೇ ಹೆಚ್ಚುವರಿಯಾಗಿ ಸೀಟ್ ಸೇರ್ಪಡೆಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ. 

ದ್ವಿತೀಯ ಪಿಯುಸಿ ಪರೀಕ್ಷೆ: ಶೇ.89ರಷ್ಟು ವಿದ್ಯಾರ್ಥಿಗಳು ಹಾಜರು
ಸರಾಸರಿ ಆಧಾರದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿರುವ ಫಲಿತಾಂಶವನ್ನು ತಿರಸ್ಕರಿಸಿ ಪರೀಕ್ಷೆಗೆ ತಮ್ಮ ಹೆಸರನ್ನು ದಾಖಲಿಸಿದ್ದ 16,687 ವಿದ್ಯಾರ್ಥಿಗಳ ಪೈಕಿ ಶೇ.89 ರಷ್ಟು ವಿದ್ಯಾರ್ಥಿಗಳು ಮಂಗಳವಾರ ನಡೆದ ದ್ವಿತೀಯ ಪಿಯುಸಿ ಇಂಗ್ಲೀಷ್ ಭಾಷೆ ಪರೀಕ್ಷೆಗೆ ಹಾಜರಾಗಿದ್ದರ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com