ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಿ: ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಆರೋಗ್ಯ ಆಯೋಗ ಸೂಚನೆ

ಜಿಲ್ಲೆಗಳಲ್ಲಿ ಕೊರೋನಾ ಪರೀಕ್ಷೆಯ ಹೆಚ್ಚಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾ ಆಡಳಿತ ಮಂಡಳಿಗಳಿಗೆ ರಾಷ್ಟ್ರೀಯ ಆರೋಗ್ಯ ಆಯೋಗ ಬುಧವಾರ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಜಿಲ್ಲೆಗಳಲ್ಲಿ ಕೊರೋನಾ ಪರೀಕ್ಷೆಯ ಹೆಚ್ಚಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾ ಆಡಳಿತ ಮಂಡಳಿಗಳಿಗೆ ರಾಷ್ಟ್ರೀಯ ಆರೋಗ್ಯ ಆಯೋಗ ಬುಧವಾರ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. 

ಪ್ರತಿ ಜಿಲ್ಲೆಯಲ್ಲಿ ಒಟ್ಟಾರೆ ಪರೀಕ್ಷೆಯಲ್ಲಿ ಶೇ.70 ಆರ್‌ಟಿಪಿಸಿಆರ್‌ ಹಾಗೂ ಶೇ.30 ರ್ಯಾಪಿಡ್‌ಆ್ಯಂಟಿಜಿನ್‌ ಪರೀಕ್ಷೆ ನಡೆಸಬೇಕು. ಒಟ್ಟು ಪರೀಕ್ಷೆಯ ಅರ್ಧದಷ್ಟು ತಾಲೂಕು ಕೇಂದ್ರಗಳ ಹೊರಗೆ ನಡೆಯಬೇಕೆಂದು ಆಯೋಗ ಆದೇಶದಲ್ಲಿ ತಿಳಿಸಿದೆ. 

ಒಟ್ಟು ಪರೀಕ್ಷೆಯಲ್ಲಿ ಕಡ್ಡಾಯವಾಗಿ ಶೇ.10 ಪರೀಕ್ಷೆ ಮಕ್ಕಳಿಗೆ ನಡೆಸಬೇಕು ಎಂದು ಆದೇಶಿಸಲಾಗಿದೆ. 15ರಿಂದ 18 ವರ್ಷದ ಮಕ್ಕಳಲ್ಲಿ  ಸೋಂಕಿನ ರೋಗ ಲಕ್ಷಣಗಳಿದ್ದರೆ ಕಡ್ಡಾಯವಾಗಿ ರ್ಯಾಪಿಡ್‌ ಆ್ಯಂಟಿಜಿನ್‌ ಪರೀಕ್ಷೆ ನಡೆಸಬೇಕು ಮತ್ತು ಪಾಸಿಟಿವಿಟಿ ದರ ಶೇ.5ಕ್ಕಿಂತಲೂ ಹೆಚ್ಚು ಇರುವ ಜಿಲ್ಲೆಗಳಲ್ಲಿ ಪ್ರಾಥಮಿಕ ಸಂಪರ್ಕಿತರು, ಅವರ ಸಂಬಂಧಿಕರು ಹಾಗೂ ಸಾರಿ, ಐಎಲ್ಐ ನಿಂದ ಬಳಲುತ್ತಿರುವ ಜನರಿಗೆ ಆರ್'ಟಿ-ಪಿಸಿಆರ್ ಪರೀಕ್ಷೆಯನ್ನು ಕಡ್ಡಾಯವಾಗಿ ನಡೆಸಬೇಕು  ಎಂದು ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್‌ ಸೂಚಿಸಿದ್ದಾರೆಂದು ತಿಳಿದುಬಂದಿದೆ. 

ರಾಜ್ಯದಲ್ಲಿ  ಬುಧವಾರ 1,224 ಮಂದಿಗೆ ಸೋಂಕು ತಗಲಿದ್ದು, 22 ಮಂದಿ ಮೃತಪಟ್ಟಿದ್ದಾರೆ. ಜತೆಗೆ 1,668 ಮಂದಿ ಗುಣಮುಖರಾಗಿದ್ದಾರೆ. ಮಂಗಳವಾರಕ್ಕೆ ಹೋಲಿಸಿದರೆ ಸೋಂಕು ಪರೀಕ್ಷೆಗಳು 5 ಸಾವಿರ (1.95 ಲಕ್ಷಕ್ಕೆ) ಹೆಚ್ಚಳವಾಗಿವೆ. ಹೊಸ ಪ್ರಕರಣ 35, ಸೋಂಕಿತರ ಸಾವು 7 ಕಡಿಮೆಯಾಗಿವೆ. ಪಾಸಿಟಿವಿಟಿ ದರ ಶೇ.0.6ರಷ್ಟಿದ್ದು, ಮರಣ ದರ ಶೇ.2.3ರಿಂದ 1.8ಕ್ಕಿಳಿದಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com