ಸಾರ್ವಜನಿಕ ಗಣೇಶೋತ್ಸವ ಮೇಲಿನ ನಿರ್ಬಂಧ ಸಡಿಲಿಸದಂತೆ ತಜ್ಞರ ಎಚ್ಚರಿಕೆ: ಬಲಪಂಥೀಯರ ವಿರೋಧ

ಯಾವುದೇ ಸಾರ್ವಜನಿಕ ಸಮಾರಂಭಗಳು, ಮೆರವಣಿಗೆಗಳಿಂದ ಕೊರೊನಾ ಸೋಂಕು ವ್ಯಾಪಕವಾಗಿ ಹರಡಲು ಕಾರಣವಾಗುವುದರಿಂದ ಸರ್ಕಾರ ಗಣೇಶೋತ್ಸವ ಸಂಬಂಧ ಸಾರ್ವಜನಿಕ ಆಚರಣೆಗೆ ನಿರ್ಬಂಧ ವಿಧಿಸಿತ್ತು. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ರೂಪಿಸಲಾಗಿರುವ ಕೊರೊನಾ ಮಾರ್ಗಸೂಚಿಯನ್ನು ಪರಿಸ್ಥಿತಿ ನೋಡಿಕೊಂಡು ಪರಿಷ್ಕರಣೆಗೆ ಒಳಪಡಿಸಲಾಗುವ ಸೂಚನೆ ನೀಡಿದ್ದಾರೆ. 

ಬಲಪಂಥೀಯರು ಸಾರ್ವಜನಿಕ ಗಣೇಶೋತ್ಸವ ಆಚರಣೆಗಳಿಗೆ, ಮೆರವಣಿಗೆಗಳಿಗೆ ಅವಕಾಶ ಮಾಡಿಕೊಂಡುವಂತೆ ಒತ್ತಾಯಿಸಿದ್ದವು. ಆದರೆ, ಯಾವುದೇ ಸಾರ್ವಜನಿಕ ಸಮಾರಂಭಗಳು, ಮೆರವಣಿಗೆಗಳಿಂದ ಕೊರೊನಾ ಸೋಂಕು ವ್ಯಾಪಕವಾಗಿ ಹರಡಲು ಕಾರಣವಾಗುವುದರಿಂದ ಸರ್ಕಾರ ಗಣೇಶೋತ್ಸವ ಸಂಬಂಧ ಸಾರ್ವಜನಿಕ ಆಚರಣೆಗೆ ನಿರ್ಬಂಧ ವಿಧಿಸಿತ್ತು. 

ಆದರೆ ಕೆಲ ದಿನಗಳ ಹಿಂದೆ ಬಿಜೆಪಿ ಶಾಸಕ ಬಸವರಾಜ ಯತ್ನಾಳ್ ಅವರು ಗಣೇಶೋತ್ಸವ ಅಥವಾ ಯಾವುದೇ ಹಿಂದೂ ಆಚರಣೆಗೆ ಯಾವುದೇ ನಿರ್ಬಂಧ ಹೇರದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿದ್ದರು. ಅಲ್ಲದೆ ಮುಖ್ಯಮಂತ್ರಿಗಳು ನಿರ್ಬಂಧ ವಿಧಿಸಿದರೂ ತಾವೂ ಸುಮ್ಮನೆ ಇರುವುದಿಲ್ಲ ಎಂದು ಧಮ್ಕಿ ಹಾಕಿದ್ದರು. 

ಇದೇ ವೇಳೆ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡದಿದ್ದರೆ ತಾವು ದಕ್ಷಿಣಕನ್ನಡ ಜಿಲ್ಲೆಯ ಬಿಜೆಪಿ ನಾಯಕರ ನಿವಾಸದ ಮುಂದೆ ಧರಣಿ ಕೂರುವುದಾಗಿ ಶ್ರೀರಾಮ ಸೇನೆಯ ರಾಜ್ಯ ಕಾರ್ಯದರ್ಶಿ ಆನಂದ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com