ವಾಯುಭಾರ ಕುಸಿತ: ಮಳೆ ಅಬ್ಬರ, 13 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಒಟ್ಟು 13 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
Published: 27th August 2021 10:05 AM | Last Updated: 27th August 2021 01:11 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಒಟ್ಟು 13 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದೇ 30ರವರೆಗೂ ರಾಜ್ಯದ ವಿವಿಧ ಜಿಲ್ಲೆಗಳ್ಲಲ್ಲಿ ಮಳೆಯ ಕಾಟ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲೂ ಮಳೆಯಾಗಲಿದೆ. ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಕೋಲಾರ ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕುದಿನ ಮಳೆಯಾಗಲಿದೆ. ಪರಿಣಾಮ ರಾಜ್ಯದ 13 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗಲಿದ್ದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಸಿ . ಎಸ್ . ಪಾಟೀಲ್ ಮಾಹಿತಿ ನೀಡಿದ್ದಾರೆ.