ನಾಳೆಯೊಳಗೆ ಅತ್ಯಾಚಾರಿ ಆರೋಪಿಗಳನ್ನು ಹಿಡಿಯುತ್ತೇವೆ: ಮಾಜಿ ಸಿಎಂ ಯಡಿಯೂರಪ್ಪ
ನಾಳೆಯೊಳಗೆ ಮೈಸೂರಿನಲ್ಲಾದ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಸರ್ಕಾರ ಬಂಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Published: 27th August 2021 08:34 PM | Last Updated: 27th August 2021 08:34 PM | A+A A-

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಬೆಂಗಳೂರು: ನಾಳೆಯೊಳಗೆ ಮೈಸೂರಿನಲ್ಲಾದ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಸರ್ಕಾರ ಬಂಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರಿಗೆ ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಪೊಲೀಸ್ ಅಧಿಕಾರಿಗಳು ತಮ್ಮ ಶಕ್ತಿಮೀರಿ ಪ್ರಾಮಾಣಿಕವಾಗಿ ಅಪರಾಧಿಗಳನ್ನು ಹಿಡಿಯುವ ಕೆಲಸ ಮಾಡುತ್ತಿದ್ದಾರೆ. ನಿಶ್ಚಿತವಾಗಿ ಅಪರಾಧಿಗಳು ಸಿಕ್ಕೇ ಸಿಗುತ್ತಾರೆ. ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಇನ್ನು ಮುಂದೆ ಈ ರೀತಿಯ ಘಟನೆ ಮರುಕಳಿಸದಂತೆ ಅಪರಾಧಿಗಳಿಗೆ ಶಿಕ್ಷೆ ಕೊಡಲು ಯಾವುದೇ ಹಿಂದೆ ಮುಂದೆ ನೋಡುವುದಿಲ್ಲ .ಪೊಲೀಸ್ ಇಲಾಖೆ, ಗೃಹಸಚಿವರು, ಸಿಎಂ ಎಲ್ಲರೂ ವಿಶೇಷ ಪ್ರಯತ್ನ ಮಾಡುತ್ತಿದ್ದಾರೆ ಎಂದರು.
ಇದೇ ವೇಳೆ ಗಣೇಶ ಹಬ್ಬದ ಬಳಿಕ ಪಕ್ಷದ ರಾಜ್ಯಾಧ್ಯಕ್ಷರೂ ಸೇರಿದಂತೆ ಪಕ್ಷದ ಮುಖಂಡರ ಜೊತೆ ರಾಜ್ಯ ಪ್ರವಾಸ ಮಾಡುತ್ತಿದ್ದು, ಗಣೇಶ ಹಬ್ಬದ ಬಳಿಕ ಪಕ್ಷ ಸಂಘಟನೆಯ ರಾಜ್ಯ ಪ್ರವಾಸಕ್ಕೆ ತೆರಳುತ್ತಿರುವುದಾಗಿ ಮಾಜಿ ಸಿಎಂ ಹೇಳಿದರು.
ಪಕ್ಷದ ನಾಯಕರ ಜೊತೆ ಚರ್ಚೆ ಮಾಡಿ ಯಾವತ್ತು ಪ್ರವಾಸ ಹೋಗಬೇಕು ಎಂದು ನಿರ್ಧಾರ ಮಾಡ್ತೀವಿ. ನಾನು ಒಬ್ಬನೇ ರಾಜ್ಯ ಪ್ರವಾಸಕ್ಕೆ ಹೋಗುವ ಪ್ರಶ್ನೆಯೇ ಇಲ್ಲ. ಪಕ್ಷದ ಅಧ್ಯಕ್ಷರು, ಮಂತ್ರಿಗಳ ಜೊತೆ ಚರ್ಚೆ ನಡೆಸಿದ ನಂತರ ಪ್ರವಾಸದ ದಿನಾಂಕ ನಿಗದಿ ಮಾಡುತ್ತೇನೆ ಎಂದರು.