ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ಪೊಲೀಸರ ಮೇಲೆ ವಿಶ್ವಾಸವಿದೆ ಎಂದು ಸಿಎಂ ಬೊಮ್ಮಾಯಿ!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ತವರು ಜಿಲ್ಲೆ ಹಾವೇರಿಗೆ ಭೇಟಿ ನೀಡಿ ಹಲವು ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯ ನೆರವೇರಿಸಲಿದ್ದಾರೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ತವರು ಜಿಲ್ಲೆ ಹಾವೇರಿಗೆ ಭೇಟಿ ನೀಡಿ ಹಲವು ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯ ನೆರವೇರಿಸಲಿದ್ದಾರೆ.

ಈ ಬಗ್ಗೆ ತಮ್ಮ ನಿವಾಸದ ಹೊರಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಇಂದು ನನ್ನ ತವರು ಜಿಲ್ಲೆಗೆ ಭೇಟಿ ನೀಡುತ್ತಿದ್ದೇನೆ. ರಾಣೆಬೆನ್ನೂರಿನಲ್ಲಿ 24/7 ಕುಡಿಯುವ ನೀರಿನ ಯೋಜನೆ, ಹಾಲು, ಹಾವೇರಿಯಲ್ಲಿ ಹಾಲು ಸಂಸ್ಕರಣಾ ಘಟಕ ಉದ್ಘಾಟನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಲಿದೆ. ಹಾವೇರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹಿಂದೆಯೇ ಹಲವು ಯೋಜನೆಗಳನ್ನು ರೂಪಿಸಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡುತ್ತೇವೆ ಎಂದರು.

ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳ ಬಂಧನದ ಬಗ್ಗೆ ಕೇಳಿದಾಗ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸಿಎಂ ಪ್ರಕಟಿಸಲಿಲ್ಲ, ಬದಲಿಗೆ ಗ್ಯಾಂಗ್ ರೇಪ್ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಐದು ತಂಡಗಳಾಗಿ ಮಾಡಿ ಕಾರ್ಯಾಚರಣೆ ಮಾಡಿದ್ದಾರೆ. ಆದಷ್ಟು ಬೇಗನೆ ಆರೋಪಿಗಳನ್ನು ಹಿಡಿಯಬೇಕೆಂದು ನಾನು ಮೊನ್ನೆಯೇ ಸೂಚನೆ ನೀಡಿದ್ದೆ. ಈ ಹಿಂದೆ ಇಂತಹ ಪ್ರಕರಣಗಳಲ್ಲಿ ನಮ್ಮ ಪೊಲೀಸರು ಬೇಗನೆ ಪ್ರಕರಣ ಭೇದಿಸಿದ್ದು, ಈ ಪ್ರಕರಣದಲ್ಲಿ ಕೂಡ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗುತ್ತಾರೆ ಎಂದು ವಿಶ್ವಾಸ ಹೊಂದಿದ್ದೇನೆ ಎಂದು ಹೇಳಿದರು.

ಗ್ಯಾಂಗ್ ರೇಪ್ ಪ್ರಕರಣದಲ್ಲಿ ಇದುವರೆಗೆ ಐವರನ್ನು ಪೊಲೀಸರು ಬಂಧಿಸಿದ್ದು ಓರ್ವ ತಪ್ಪಿಸಿಕೊಂಡಿದ್ದಾನೆ, ಆತನ ಹುಡುಕಾಟ ನಡೆಯುತ್ತಿದೆ ಎಂಬ ಮಾಹಿತಿ ಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com