ನಾಯಂಡಹಳ್ಳಿ-ಕೆಂಗೇರಿ ಮೆಟ್ರೊ ವಿಸ್ತರಿತ ಮಾರ್ಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಸಿರು ನಿಶಾನೆ, ನಾಳೆ ಸಂಚಾರ ಆರಂಭ 

ನಮ್ಮ ಮೆಟ್ರೊ 2ನೇ ಹಂತದ ಮೈಸೂರು ರಸ್ತೆಯ ನಾಯಂಡಹಳ್ಳಿ-ಕೆಂಗೇರಿ ವಿಸ್ತರಿತ ಮಾರ್ಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಭಾನುವಾರ ಬೆಳಗ್ಗೆ ಚಾಲನೆ ನೀಡಿದ್ದಾರೆ.
ಮೆಟ್ರೊ ರೈಲಿಗೆ ಹಸಿರು ನಿಶಾನೆ ತೋರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮೆಟ್ರೊ ರೈಲಿಗೆ ಹಸಿರು ನಿಶಾನೆ ತೋರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ನಮ್ಮ ಮೆಟ್ರೊ 2ನೇ ಹಂತದ ಮೈಸೂರು ರಸ್ತೆಯ ನಾಯಂಡಹಳ್ಳಿ-ಕೆಂಗೇರಿ ವಿಸ್ತರಿತ ಮಾರ್ಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಭಾನುವಾರ ಬೆಳಗ್ಗೆ ಚಾಲನೆ ನೀಡಿದ್ದಾರೆ.

ಮೈಸೂರು ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಮೆಟ್ರೋ ನಿಲ್ದಾಣದವರೆಗಿನ 7.5 ಕಿ.ಮೀ ಮೆಟ್ರೋ ನೇರಳೆ ಮಾರ್ಗ ಇದಾಗಿದೆ. ಇಂದು ಉದ್ಘಾಟನೆ ನೆರವೇರಿದ ಮುಖ್ಯ ವೇದಿಕೆ ಕಾರ್ಯಕ್ರಮದಲ್ಲಿ ಕನ್ನಡ ಭಾಷೆ ಮಾತ್ರ ಸಂಪೂರ್ಣ ಮಾಯವಾಗಿತ್ತು, ಬಿಎಂಆರ್ ಸಿಎಲ್ ಸಂಪೂರ್ಣವಾಗಿ ಇಂಗ್ಲಿಷ್ ನಲ್ಲಿ ಬರೆದಿತ್ತು. 7.5 ಕಿಲೋ ಮೀಟರ್ ಉದ್ದದ ಮೆಟ್ರೊ ಮಾರ್ಗ ಇದಾಗಿದೆ.

ಕಾರ್ಯಕ್ರಮದಲ್ಲಿ ಸಚಿವರುಗಳಾದ ಆರ್ ಅಶೋಕ್, ವಿ ಮುನಿರತ್ನ, ವಿ ಸೋಮಣ್ಣ, ಸಂಸದ ತೇಜಸ್ವಿನಿ ಸೂರ್ಯ ಮೊದಲಾದವರು ಭಾಗವಹಿಸಿದ್ದರು. 
 

ಗಳೂರಿನ ಮೈಸೂರು ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿವರೆಗಿನ ಒಟ್ಟು 7.5 ಕಿಲೋ ಮೀಟರ್ ಉದ್ದದ 6 ನಿಲ್ದಾಣಗಳಿರುವ ಮಾರ್ಗ ಇದಾಗಿದೆ. 2019ರಲ್ಲಿ ಉದ್ಘಾಟನೆಯಾಗಬೇಕಿದ್ದ ಈ ಮೆಟ್ರೊ ಮಾರ್ಗ ಕಾಮಗಾರಿ ವಿಳಂಬವಾದ ಹಿನ್ನೆಲೆಯಲ್ಲಿ 2 ವರ್ಷ ತಡವಾಗಿ ಸಂಚಾರಕ್ಕೆ ಮುಕ್ತವಾಯಿತು.

ಸಾವಿರದ 560 ಕೋಟಿ ರೂಪಾಯಿ ವೆಚ್ಚದಲ್ಲಿ ಈ ರೈಲು ಮಾರ್ಗ ನಿರ್ಮಾಣಗೊಂಡಿದ್ದು, ಭೂ ಸ್ವಾಧೀನಕ್ಕಾಗಿ 360 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಈ ಮಾರ್ಗದಲ್ಲಿ ಮೆಟ್ರೋ ಸೇವೆ ಆರಂಭವಾದರೆ ದಿನಕ್ಕೆ 75 ಸಾವಿರ ಪ್ರಯಾಣಿಕರು ಸಂಚರಿಸುವ ನಿರೀಕ್ಷೆಯಿದೆ. ಇನ್ನು ನಮ್ಮ ಮೆಟ್ರೋ ಯೋಜನೆಯ ಹಂತ-2 ಅಡಿ ನಾಯಂಡಹಳ್ಳಿಯಿಂದ ಕೆಂಗೇರಿಯವರೆಗೆ ರೀಚ್ 2ರ ವಿಸ್ತರಣಾ ಕಾಮಗಾರಿ ಯೋಜನೆ ಇದಾಗಿದೆ.

ನೇರಳೆ ಮಾರ್ಗ ಇದಾಗಿದ್ದು, ನಾಯಂಡಹಳ್ಳಿ, ರಾಜರಾಜೇಶ್ವರಿ ನಗರ, ಜ್ಞಾನ ಭಾರತಿ, ಪಟ್ಟಣಗೆರೆ, ಮೈಲಸಂದ್ರ ಮತ್ತು ಕೆಂಗೇರಿ ಬಸ್ ನಿಲ್ದಾಣ ಸೇರಿದಂತೆ ಒಟ್ಟು ಆರು ನಿಲ್ದಾಣಗಳನ್ನು ಹೊಂದಿದೆ. ಅಲ್ಲದೇ ನೇರಳೆ ಮಾರ್ಗ ಬೈಯಪ್ಪನಹಳ್ಳಿ-ಕೆಂಗೇರಿವರೆಗೆ ಮೆಟ್ರೋ ಸಂಚಾರ ಇರಲಿದ್ದು, ಬೈಯಪ್ಪನ ಹಳ್ಳಿಯಿಂದ ಕೆಂಗೇರಿಗೆ ಪ್ರಯಾಣಿಸಲು 56 ರೂಪಾಯಿ ದರ ನಿಗದಿಯಾಗಿದೆ.ಕೆಂಗೇರಿಯಿಂದ ಸಿಲ್ಕ್ ಇನ್ಸ್​ಟಿಟ್ಯೂಟ್​ವರೆಗೆ 60 ರೂಪಾಯಿ ದರ ನಿಗದಿಯಾಗಿದೆ. ಹಾಗೂ ಬೈಯಪ್ಪನಹಳ್ಳಿಯಿಂದ ಮೈಸೂರು ರಸ್ತೆಗೆ 45 ರೂಪಾಯಿ ಟಿಕೆಟ್ ದರ ನಿರ್ಧರಿಸಲಾಗಿದೆ.

ನಾಳೆಯಿಂದ ಸಂಚಾರಕ್ಕೆ ಮುಕ್ತ: ರೈಲು ಮಾರ್ಗ ನಾಳೆ ಸೋಮವಾರದಿಂದ ಸಂಚಾರಕ್ಕೆ ಮುಕ್ತವಾಗಲಿದೆ. ಜನರು ಹೆಚ್ಚು ಓಡಾಡುವ ಸಮಯದಲ್ಲಿ 7 ರಿಂದ 8 ನಿಮಿಷಕ್ಕೆ ಒಂದು ರೈಲು ಓಡಾಡಲಿದ್ದು, ಉಳಿದ ಅವಧಿಯಲ್ಲಿ 10 ರಿಂದ 12 ನಿಮಿಷಕ್ಕೊಂದು ರೈಲು ಕೆಂಗೇರಿ ಮತ್ತು ಬೈಯಪ್ಪನಹಳ್ಳಿ ನಡುವೆ ಸಂಚಾರ ಮಾಡಲಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com