ಸಾಮೂಹಿಕ ಅತ್ಯಾಚಾರ ಪ್ರಕರಣ: ಕೃತ್ಯ ಎಸಗಿದವರು 7 ಜನ, ಜೈಲಿಗೆ ಹೋಗಿ ಬಂದರೂ ಬುದ್ದಿ ಕಲಿತಿರಲಿಲ್ಲ..!!

ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಐವರು ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಸಾಮೂಹಿಕ ಅತ್ಯಾಚಾರ
ಸಾಮೂಹಿಕ ಅತ್ಯಾಚಾರ

ಮೈಸೂರು: ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಐವರು ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಅತ್ಯಾಚಾರ ಪ್ರಕರಣದಲ್ಲಿ ಒಟ್ಟು 6 ಆರೋಪಿಗಳು ಶಾಮೀಲಾಗಿದ್ದರು ಎಂದು ಪೊಲೀಸ್ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿತ್ತು. ಆದರೆ, ವಿಚಾರಣೆ ವೇಳೆ ಆರೋಪಿಗಳು ಒಟ್ಟು 7 ಜನ ಸೇರಿ ಈ ಕೃತ್ಯ ಎಸಗಿರುವುದಾಗಿ ಬಾಯ್ಬಿಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ದುಷ್ಕೃತ್ಯದ ವೇಳೆ ಇದ್ದಿದ್ದು 6 ಜನ ಅಲ್ಲ. ಇನ್ನೋರ್ವ ಕೂಡಾ ಭಾಗಿಯಾಗಿದ್ದಾನೆ ಎಂದು ಹೇಳಿದ್ದಾರೆ. ಆ ಮೂಲಕ ಅತ್ಯಾಚಾರದಲ್ಲಿ 6 ಜನ ಭಾಗಿಯಾಗಿದ್ದು, 5 ಜನರನ್ನು ಪತ್ತೆ ಹಚ್ಚಿದ್ದೇವೆ ಓರ್ವ ತಲೆಮರಿಸಿಕೊಂಡಿದ್ದಾನೆ ಎಂದಿದ್ದ ಪೊಲೀಸರಿಗೆ ಇನ್ನೂ ಒಬ್ಬ ತಪ್ಪಿಸಿಕೊಂಡಿರುವುದು ಗೊತ್ತಾಗಿದೆ. ಸದ್ಯ ತಮಿಳುನಾಡು ಮೂಲದ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಾಥಮಿಕ ತನಿಖೆಯಲ್ಲಿ ಇನ್ನೋರ್ವ ತಪ್ಪಿಸಿಕೊಂಡಿದ್ದಾನೆ ಎಂದು ಹೇಳಿದ್ದರು. ಆದರೆ, ಈಗ ತಪ್ಪಿಸಿಕೊಂಡಿರುವುದು ಇಬ್ಬರು ಎಂಬ ಮಾಹಿತಿ ಲಭ್ಯವಾಗಿದ್ದು, ಒಟ್ಟು 7 ಜನ ದುಷ್ಕೃತ್ಯದಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ. ಹೀಗಾಗಿ ಆರೋಪಿಗಳು ನೀಡಿದ ಮಾಹಿತಿಯನ್ನು ಆಧರಿಸಿ ಇನ್ನಿಬ್ಬರಿಗಾಗಿ  ಪೊಲೀಸರು ಹುಡುಕಾಟ ಶುರುಮಾಡಿದ್ದಾರೆ.

ಬಂಧಿತರ ವಿಚಾರಣೆಯ ವೇಳೆ ಇನ್ನೋರ್ವ ಇರುವ ಬಗ್ಗೆ ಮಾಹಿತಿ ದೊರಕಿದ್ದು, ಸದ್ಯ ಪರಾರಿಯಾಗಿರುವ ಇಬ್ಬರಿಗೆ ಪೊಲೀಸರು ಶೋಧಕಾರ್ಯ ಆರಂಭಿಸಿದ್ದಾರೆ.

ನ್ಯಾಯಾಂಗ ಬಂಧನ
ಬಂಧಿತ ಐವರು ಆರೋಪಿಗಳನ್ನು 10 ದಿನ ಪೊಲೀಸ್ ಕಸ್ಟಡಿಗೆ ನೀಡಿ ಮೈಸೂರಿನ 3ನೇ ಜೆಎಂಎಫ್‌ಸಿ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಆರೋಪಿಗಳನ್ನ ಜಡ್ಜ್‌ ಎದುರು ಹಾಜರುಪಡಿಸಿದ್ದ ಪೊಲೀಸರು ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಪೊಲೀಸರ ಮನವಿ ಪುರಸ್ಕರಿಸಿದ 3ನೇ ಜೆಎಂಎಫ್‌ಸಿ ಜಡ್ಜ್ ಬಂಧಿತ ಐವರು ಆರೋಪಿಗಳನ್ನು 10 ದಿನ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ. ಇಂದಿನಿಂದ ಪೊಲೀಸ್ ಕಸ್ಟಡಿಯಲ್ಲಿ ಆರೋಪಿಗಳಿಗೆ ತೀವ್ರ ವಿಚಾರಣೆ ನಡೆಯಲಿದ್ದು, ಕಾಮುಕರಿಂದ ಮತ್ತಷ್ಟು ಮಾಹಿತಿ ಕಲೆ ಹಾಕುವ ವಿಶ್ವಾಸದಲ್ಲಿ ಮೈಸೂರು ಪೊಲೀಸರಿದ್ದಾರೆ.

ಜೈಲಿಗೆ ಹೋಗಿ ಬಂದರು ಬುದ್ದಿ ಕಲಿತಿರಲಿಲ್ಲ
ವಿಚಾರಣೆ ವೇಳೆ ಆರೋಪಿಗಳ ಕ್ರಿಮಿನಲ್ ಹಿನ್ನೆಲೆ ಬಯಲಾಗಿದ್ದು. ಓರ್ವ 6 ತಿಂಗಳ ಹಿಂದೆಯಷ್ಟೇ ಪೊಲೀಸರ ಅತಿಥಿಯಾಗಿದ್ದ. ಮೈಸೂರಿನ ನಜರ್ಬಾದ್ ಠಾಣೆ ಪೊಲೀಸರು ಆತನನ್ನು ಬಂಧಿಸಿದ್ದರು. ಶ್ರೀಗಂಧದ ಮರ ಕದ್ದು ಸಿಕ್ಕಿ ಬಿದ್ದಿದ್ದ ಓರ್ವ ಆರೋಪಿ ಜೈಲಿಗೆ ಹೋಗಿ ಬಂದಿದ್ದ. ಜನವರಿ 9ರಂದು ಆರೋಪಿಯನ್ನ ಜೈಲಿಗೆ ಕಳುಹಿಸಲಾಗಿತ್ತು. ಜೈಲಿನಿಂದ ಹೊರ ಬಂದ ಬಳಿಕ ಈ ಕೃತ್ಯದಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅಂತೆಯೇ ಅತ್ಯಾಚಾರ ಪ್ರಕರಣದಲ್ಲಿ ಒಟ್ಟು 6 ಆರೋಪಿಗಳು ಎಂದು ಹೇಳಲಾಗುತ್ತಿತ್ತು. ಆದರೆ 7 ಜನರು ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತರ ವಿಚಾರಣೆಯ ವೇಳೆ ಇನ್ನೋರ್ವ ಇರುವ ಬಗ್ಗೆ ಮಾಹಿತಿ ಸಿಕ್ಕಿದೆ. ಸದ್ಯ ಐವರು ಪೊಲೀಸರು ವಶದಲ್ಲಿದ್ದು, ಪರಾರಿಯಾಗಿರುವ ಇಬ್ಬರಿಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಆರೋಪಿಯ ತಾಯಿ ಕಣ್ಣೀರು 
ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊರ್ವನ ತಾಯಿ ಕಣ್ಣೀರು ಹಾಕಿದ್ದು. ತಮಿಳುನಾಡಿನ ತಾಳವಾಡಿ ತಾಲೂಕಿನ ಸೂಸೈಪುರಂ ಗ್ರಾಮದಲ್ಲಿ ಕಣ್ಣೀರು ಹಾಕಿರುವ ಆರೋಪಿಯ ತಾಯಿ, ಮಗನನ್ನ ಏಕೆ ಕರೆದುಕೊಂಡು ಹೋದರು ಎಂಬುದು ಗೊತ್ತಿಲ್ಲ. ನಿನ್ನೆ (ಆಗಸ್ಟ್ 28) ಮುಂಜಾನೆ ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು. ಏಕೆ ಮಗನನ್ನು ಕರೆದುಕೊಂಡು ಹೋಗುತ್ತೀರಾ ಅಂತ ಕೇಳಿದ್ದರೂ ಹೇಳಲಿಲ್ಲ ಎಂದು ಹೇಳಿದ್ದಾರೆ. ಮನೆಯಲ್ಲೆ ಮಗ ಮಲಗಿದ್ದ. ಮಲಗಿದ್ದ ಮಗನನ್ನ ನಿನ್ನೆ ಮುಂಜಾನೆ ಏಕಾಏಕಿ ಪೊಲೀಸರು ಮನೆಗೆ ನುಗ್ಗಿ ವಶಕ್ಕೆ ಪಡೆದಿದ್ದಾರೆ. ಪೊಲೀಸರ ಬಳಿ ಅಂಗಲಾಚಿ ಕೇಳಿದರೂ ಬಿಡಲಿಲ್ಲ. ಕೂಲಿ ಕೆಲಸ ಮಾಡಿಕೊಂಡು ಇಡೀ ಕುಟುಂಬವನ್ನು ನಿರ್ವಹಣೆ ಮಾಡುತ್ತಿದ್ದ ಎಂದು ಆರೋಪಿ ತಾಯಿ ಕಣ್ಣೀರು ಹಾಕಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com