ತುಮಕೂರು ಮಹಿಳೆ ಅತ್ಯಾಚಾರ ಕೊಲೆ ಪ್ರಕರಣ: ಉಸ್ತುವಾರಿ ಸಚಿವ ಭೇಟಿ; ಪ್ರಕರಣದಲ್ಲಿ ದೇವಮಾನವನ ಕೈವಾಡ?
ತುಮಕೂರು ಅತ್ಯಾಚಾರ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಕೆಲವರು ಪ್ರತಿಭಟನೆ ನಡೆಸಿದರು. ಘಟನೆ ನಡೆದು ಐದು ದಿನಗಳ ನಂತರ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಭೇಟಿ ನೀಡಿ, ಸಂತ್ರಸ್ತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
Published: 30th August 2021 09:25 AM | Last Updated: 30th August 2021 01:45 PM | A+A A-

ಸಾಂದರ್ಭಿಕ ಚಿತ್ರ
ತುಮಕೂರು: ತುಮಕೂರು ಅತ್ಯಾಚಾರ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಕೆಲವರು ಪ್ರತಿಭಟನೆ ನಡೆಸಿದರು. ಘಟನೆ ನಡೆದು ಐದು ದಿನಗಳ ನಂತರ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಭೇಟಿ ನೀಡಿ, ಸಂತ್ರಸ್ತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ ಎಂಬ ಟೀಕೆಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾದ ನಂತರ ಭೇಟಿ ಕೊಟ್ಟಿದ್ದಾರೆ. ತನಿಖೆ ನಿಧಾನಗತಿಯಲ್ಲಿ ಸಾಗಿರುವುದನ್ನೂ ಪ್ರಶ್ನಿಸಿಲ್ಲ.
ಈವರೆಗೂ ಪೊಲೀಸರು ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬುದನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ. ಹೀಗೇಕೆ ಎಂಬುದೇ ಎಲ್ಲರ ಮುಂದಿರುವ ಪ್ರಶ್ನೆ. ಬೆಟ್ಟದ ಬಳಿ ಮಹಿಳೆಯ ಮೃತದೇಹ ಪತ್ತೆಯಾದ ಸಮಯದಲ್ಲಿ ಮೈಮೇಲೆ ಬಟ್ಟೆ ಇರಲಿಲ್ಲ. ರಕ್ತದ ಕಲೆಗಳು ಇದ್ದವು. ಅತ್ಯಾಚಾರ ನಡೆದಿದೆ ಎಂಬುದು ಪೊಲೀಸರಿಗೆ ಗೊತ್ತಿದ್ದರೂ ಬಹಿರಂಗಪಡಿಸಲು ಸಿದ್ಧರಿಲ್ಲ. ವರದಿ ಬರಬೇಕು ಎನ್ನುತ್ತಿದ್ದಾರೆ.
ಪ್ರಕರಣದಲ್ಲಿ ಸ್ವಯಂಘೋಷಿತ ದೇವಮಾನವನ ಕೈವಾಡವಿದೆ ಎಂದು ಶಂಕಿಸಲಾಗಿದೆ, ಪ್ರಕರಣ ನಡೆದ ನಂತರ ಆತ ಸ್ಥಳ ಬಿಟ್ಟು ಪರಾರಿಯಾಗಿದ್ದಾನೆ. ಹಿರಿಯ ವ್ಯಕ್ತಿಯೊಬ್ಬ ಇಲ್ಲಿ ಅಪರಿಚಿತರಿಗೆ ಆಹ್ವಾನ ನೀಡಿ ಅವರಿಗೆ ಡ್ರಗ್ಸ್ ಪೂರೈಸುತ್ತಿದ್ದನು. ಐದು ತಿಂಗಳ ವಿಕೃತ ರೀತಿಯಲ್ಲಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬ ಈ ಪ್ರದೇಶದಲ್ಲಿ ಅಲೆದಾಡುತ್ತಿದ್ದನು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.