ಮೈಸೂರಿನಲ್ಲಿ ಹೆಚ್ಚುತ್ತಿರುವ ಕ್ರೈಂ: ಹೆಚ್ಚಿನ ಸಿಬ್ಬಂದಿ ನಿಯೋಜನೆಗೆ ಡಿಜಿ & ಐಜಿಪಿ ಪ್ರವೀಣ್ ಸೂದ್ ಸೂಚನೆ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 23 ವರ್ಷದ ಯುವತಿ ಮೇಲೆ ಗ್ಯಾಂಗ್ ರೇಪ್, ಶೂಟೌಟ್ ಮತ್ತು ಚಿನ್ನಾಭರಣ ಅಂಗಡಿಯಲ್ಲಿ ಯುವಕನ ಕೊಲೆ ಪ್ರಕರಣದ ನಂತರ ತೀವ್ರ ಟೀಕೆಗೆ ಗುರಿಯಾದ ಮೈಸೂರು ಪೊಲೀಸರು ಭದ್ರತೆ ಹೆಚ್ಚಿಸಲು ನಿರ್ಧರಿಸಿದ್ದಾರೆ.
ಪ್ರವೀಣ್ ಸೂದ್
ಪ್ರವೀಣ್ ಸೂದ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 23 ವರ್ಷದ ಯುವತಿ ಮೇಲೆ ಗ್ಯಾಂಗ್ ರೇಪ್, ಶೂಟೌಟ್ ಮತ್ತು ಚಿನ್ನಾಭರಣ ಅಂಗಡಿಯಲ್ಲಿ ಯುವಕನ ಕೊಲೆ ಪ್ರಕರಣದ ನಂತರ ತೀವ್ರ ಟೀಕೆಗೆ ಗುರಿಯಾದ ಮೈಸೂರು ಪೊಲೀಸರು ಭದ್ರತೆ ಹೆಚ್ಚಿಸಲು ನಿರ್ಧರಿಸಿದ್ದಾರೆ.

ಕಳೆದ ಮೂರು ದಿನಗಳಿಂದ ನಗರದಲ್ಲಿ ಬೀಡುಬಿಟ್ಟಿರುವ ಕರ್ನಾಟಕ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್, ಹಿರಿಯ ಜಿಲ್ಲಾ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಸೂಚಿಸಿದರು.

ಈ ಹಿಂದೆ ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಪ್ರವೀಣ್ ಸೂದ್ ಸೇವೆ ಸಲ್ಲಿಸಿದ್ದರು. ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಬಲವಾದ ಸಾಕ್ಷ್ಯದೊಂದಿಗೆ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಗೆ ಸೂಚಿಸಿದ್ದಾರೆ. ಎಡಿಜಿಪಿ ಪ್ರತಾಪ್ ರೆಡ್ಡಿ, ಐಜಿ ಮಧುಕರ್ ಪವಾರ್, ಪೊಲೀಸ್ ಆಯುಕ್ತ ಚಂದ್ರ ಗುಪ್ತಾ, ಎಸ್ಪಿ ಚೇತನ್ ಇತರರು ಹಾಜರಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com