ಈವರೆಗೆ ಶೇ.54.74 ರಷ್ಟು ಪಠ್ಯ ಪುಸ್ತಕ ಪೂರೈಕೆ: ಹೈಕೋರ್ಟ್'ಗೆ ಸರ್ಕಾರ ಮಾಹಿತಿ

ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಈವರೆಗೆ ಶೇ.54.74ರಷ್ಟು ಪಠ್ಯ ಪುಸ್ತಕ ಪೂರೈಸಲಾಗಿದೆ ಎಂದು ಹೈಕೋರ್ಟ್'ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. 
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಈವರೆಗೆ ಶೇ.54.74ರಷ್ಟು ಪಠ್ಯ ಪುಸ್ತಕ ಪೂರೈಸಲಾಗಿದೆ ಎಂದು ಹೈಕೋರ್ಟ್'ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. 

ಎ.ಎ. ಸಂಜೀವ್‌ ನಾರಾಯಣ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ಚಂದ್ರ ಶರ್ಮಾ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿದೆ. 

ವಿಚಾರಣೆ ವೇಳೆ ಸರ್ಕಾರಿ ವಕೀಲರು ಹಾಜರಾಗಿ, ರಾಜ್ಯದಲ್ಲಿ ಶಾಲಾ ಪಠ್ಯಪುಸ್ತಕಗಳ ಮುದ್ರಣ ಕಾರ್ಯ ಭರದಿಂದ ಸಾಗಿದೆ. ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಈವರೆಗೆ ಶೇ.54.74ರಷ್ಟು ಪಠ್ಯ ಪುಸ್ತಕ ಪೂರೈಸಲಾಗಿದೆ. ಮುಂದಿನ 20 ದಿನಗಳಲ್ಲಿ ಎಲ್ಲಾ ಪಠ್ಯ ಪುಸ್ತಕ ಪೂರೈಕೆ ಮಾಡಲಾಗುವುದು ಎಂದು ಹೈಕೋರ್ಟ್‌ಗೆ ಭರವಸೆ ನೀಡಿದರು. 

ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ, ಪಠ್ಯಪುಸ್ತಕ ಪೂರೈಕೆ ಕಾರ್ಯವನ್ನು 20 ದಿನಗಳಲ್ಲಿ ಪೂರ್ಣಗೊಳಿಸಬೇಕು. ಪುನಃ ಸಮಯ ಕೇಳುವಂತಿಲ್ಲ ಎಂದು ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆಯನ್ನು ಮುಂದೂಡಿತು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com