ಕಡತ ವಿಲೇವಾರಿಗೆ ನೋಡೆಲ್ ಅಧಿಕಾರಿಗಳ ನೇಮಕ: ಸಿಎಂ ಬಸವರಾಜ ಬೊಮ್ಮಾಯಿ

ನ್ಯಾಯಾಲಯದಲ್ಲಿ ಮೊಕದ್ದಮೆ ಇರುವ ಕಾರಣ ಕಡತ ವಿಲೇವಾರಿಯಾಗದೇ ಇರುವ ಇಲಾಖೆಗಳಲ್ಲಿ ಕಡತ ವಿಲೇವಾರಿಗೆ ರಾಜ್ಯ ಸರ್ಕಾರ ನೋಡೆಲ್ ಅಧಿಕಾರಿಗಳನ್ನು ನೇಮಿಸುತ್ತಿದೆ...
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಬೆಂಗಳೂರು: ನ್ಯಾಯಾಲಯದಲ್ಲಿ ಮೊಕದ್ದಮೆ ಇರುವ ಕಾರಣ ಕಡತ ವಿಲೇವಾರಿಯಾಗದೇ ಇರುವ ಇಲಾಖೆಗಳಲ್ಲಿ ಕಡತ ವಿಲೇವಾರಿಗೆ ರಾಜ್ಯ ಸರ್ಕಾರ ನೋಡೆಲ್ ಅಧಿಕಾರಿಗಳನ್ನು ನೇಮಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ.

ಇಂದು ವಿಕಾಸಸೌಧದಲ್ಲಿ ನಡೆದ ಕೆಡಿಪಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕಂದಾಯ, ನಗರಾಭಿವೃಧ್ಧಿ, ಶಿಕ್ಷಣ ಸೇರಿದಂತೆ ಐದಾರು ಇಲಾಖೆಗಳಲ್ಲಿ ಬಹಳಷ್ಟು ಕಡತಗಳು ವಿಲೇವಾರಿಯಾಗದೇ ಹಾಗೆ ಉಳಿದಿವೆ. ಅದರಲ್ಲಿಯೂ ನ್ಯಾಯಾಲಯದ ಪ್ರಕರಣದಿಂದಲೂ ಸಾಕಷ್ಟು ಕಡತಗಳು ಹಾಗೇ ಉಳಿದಿವೆ. ಹೀಗಾಗಿ ನ್ಯಾಯಾಲಯದ ಪ್ರಕರಣ ಕಾರಣ ಹಾಗೇ ಉಳಿದಿರುವ ಕಡತಗಳ ವಿಲೇವಾರಿಗೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದರು.

ಕಡತಗಳ ವಿಲೇವಾರಿಗೆ ಅಧೀನ ಕಾರ್ಯದರ್ಶಿ ಅಥವಾ ಉಪಕಾರ್ಯದರ್ಶಿಗಳನ್ನು ಕಡತ ವಿಲೇವಾರಿ ನೋಡೆಲ್ ಅಧಿಕಾರಿಯನ್ನಾಗಿ ನೇಮಿಸಲಾಗುತ್ತಿದ್ದು, ನೋಡೆಲ್ ಅಧಿಕಾರಿಗಳು ಕಾನೂನು ಇಲಾಖೆ ಸಂಯೋಜನೆ ಮಾಡಿ ಎರಡು ತಿಂಗಳೊಳಗೆ ಕಡತ ವಿಲೇವಾರಿ ಮಾಡಿಸಬೇಕು ಎಂದು ಸಿಎಂ ಹೇಳಿದರು.

ಕೆಡಿಪಿ ಸಭೆಯಲ್ಲಿ ಬಜೆಟ್‍ನಲ್ಲಿ ಘೋಷಣೆ ಮಾಡಿದ ಕಾರ್ಯಕ್ರಮಗಳು ಕಾಲಮಿತಿಯೊಳಗೆ ಅನುಷ್ಠಾನವಾಗದೆ ವಿಳಂಬವಾಗುತ್ತಿರುವುದಕ್ಕೆ  ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ, ಬಜೆಟ್‍ನಲ್ಲಿ ಘೋಷಣೆ ಮಾಡಿದ ಕಾರ್ಯಕ್ರಮಗಳು ಆಯಾ ಆರ್ಥಿಕ ವರ್ಷದೊಳಗೆ ಸಂಪೂರ್ಣವಾಗಿ ಅನುಷ್ಠಾನವಾಗಬೇಕು. ಯಾವುದಾದರೂ ಇಲಾಖೆಯಲ್ಲಿ ಶೇ.100ರಷ್ಟು ಜಾರಿ ಮಾಡಿದ್ದೀರಾ? ಎಂಬ ಪ್ರಶ್ನೆಯನ್ನು ಅಧಿಕಾರಿಗಳ ಮುಂದಿಟ್ಟರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com