ಕುಕ್ಕೆಯಲ್ಲಿ ಕಳವು ಮಾಡಿದ್ದ ಕಳ್ಳಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ ಪೊಲೀಸರು: 20.2 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಪ್ರವಾಸಿಗರ ಸೋಗಿನಲ್ಲಿ ಕುಕ್ಕೆ ಸುಬ್ರಮಣ್ಯಕ್ಕೆ ಹೋಗಿ ಅಲ್ಲಿಗೆ ಬಂದಿದ್ದ ಪ್ರವಾಸಿಗರ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಮಹಿಳೆಯೋರ್ವಳನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಪ್ರವಾಸಿಗರ ಸೋಗಿನಲ್ಲಿ ಕುಕ್ಕೆ ಸುಬ್ರಮಣ್ಯಕ್ಕೆ ಹೋಗಿ ಅಲ್ಲಿಗೆ ಬಂದಿದ್ದ ಪ್ರವಾಸಿಗರ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಮಹಿಳೆಯೋರ್ವಳನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶ ಮೂಲದ ಮಹಿಳೆ ಓರ್ವಳನ್ನು ಬಂಧಿಸಿರುವ ಪೊಲೀಸರು ಆಕೆಯ ಬಳಿಯಿಂದ 20.2 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. 

ನಗರದ ಚಿನ್ನಾಭರಣ ಅಂಗಡಿಯಲ್ಲಿ ಮಾರಾಟ ಮಾಡಲು ಮಹಿಳೆಯ ಯತ್ನಿಸಿದ್ದು ಈ ವೇಳೆ ಆಕೆಯನ್ನು ವಶಕ್ಕೆ ಪಡೆಯಲಾಗಿದೆ. ಆಕೆಯ ಬಳಿ 20.2 ಲಕ್ಷ ಮೌಲ್ಯದ 439.32 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇನ್ಆನು ರೋಪಿತೆಯ ಜೊತೆಗಿದ್ದ ಸ್ನೇಹಿತನಿಗಾಗಿ ಶೋಧಕಾರ್ಯ ಮುಂದುವರೆದಿದೆ ಎಂದು ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com