ತಜ್ಞರ ಸಭೆ ಬಳಿಕ ಹೊಸ ಮಾರ್ಗಸೂಚಿ ಬಿಡುಗಡೆ: ಸಿಎಂ ಬೊಮ್ಮಾಯಿ

ತಜ್ಞರೊಂದಿಗೆ ಸಬೆ ನಡೆಸಿದ ಬಳಿಕ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ನವದೆಹಲಿ: ತಜ್ಞರೊಂದಿಗೆ ಸಭೆ ನಡೆಸಿದ ಬಳಿಕ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಂಕಿತರ ವೈದ್ಯಕೀಯ ವರದಿ ಇಂದು ಸರ್ಕಾರದ ಕೈ ಸೇರಲಿದ್ದು, ವರದಿ ಬಳಿಕ ಸೋಂಕಿತರ ಸಂಪರ್ಕಿತರ ಪತ್ತೆ ಹಚ್ಚುವ ಕಾರ್ಯ ಆರಂಭಿಸಲಾಗುತ್ತದೆ. ಇದಕ್ಕಾಗಿ ಈಗಾಗಲೇ ಕ್ರಮಗಳ ಕೈಗೊಳ್ಳಲಾಗಿದೆ. ತಜ್ಞರೊಂದಿಗೆ ಇಂದು ಮಧ್ಯಾಹ್ನ 1 ಗಂಟೆಗೆ ಸಭೆ ನಡೆಸಲಿದ್ದು, ಸಭೆ ಬಳಿಕ ಹೊಸ ಮಾರ್ಗಸೂಚಿಯನ್ನು ಸಿದ್ಧ ಪಡಿಸಲಾಗುತ್ತದೆ ಎಂದು ಹೇಳಿದ್ದಾರೆ.

ಈಗಾಗಲೇ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರೊಂದಿಗೆ ಮಾತುಕತೆ ನಡೆಸಲಾಗಿದ್ದು, ಸಚಿವರು ವೈದ್ಯಕೀಯ ವರದಿ ಹಾಗೂ ಹೊಸ ಮಾರ್ಗಸೂಚಿಗಳೊಂದಿಗೆ ತಮ್ಮ ಬಳಿ ಬರುವಂತೆ ಹೇಳಿದ್ದಾರೆಂದು ತಿಳಿಸಿದ್ದಾರೆ.

ಈಗಾಗಲೇ ರಾಜ್ಯದ ಆರೋಗ್ಯ ಸಚಿವರು ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ವೈದ್ಯಕೀಯ ವರದಿ ಪಡೆದುಕೊಳ್ಳುವಂತೆ ತಿಳಿಸಲಾಗಿದೆ. ಇಂದು ಮಧ್ಯಾಹ್ನ ಆರೋಗ್ಯ ಸಚಿವರು ಹಾಗೂ ತಜ್ಞರೊಂದಿಗೆ ತುರ್ತು ಸಭೆ ಕರೆಯಲಾಗಿದೆ ಎಂದಿದ್ದಾರೆ.

ಓಮಿಕ್ರಾನ್ ಅತಿ ವೇಗವಾಗಿ ಹರಡುವ ಮಾದರಿ ಎಂದು ವಿಶ್ವಸಂಸ್ಥೆ ಈಗಾಗಲೇ ಹೇಳಿದೆ. ಈ ರೂಪಾಂತರಿಯ ಸ್ಟೈಕ್ ಪ್ರೊಟೀನ್ ಗಳು 30ಕ್ಕೂ ಹೆಚ್ಚು ಬಾರಿ ರೂಪಾಂತರಗೊಂಡಿವೆ. ಹೀಗಾಗಿ ಲಸಿಕೆಯ ಪರಿಣಾಮವನ್ನೂ ಕುಗ್ಗಿಸಿ ಸೋಂಕು ಉಂಟು ಮಾಡಬಲ್ಲದು ಎಂಬುದು ಈ ವೈರಾಣು ಬಗೆಗಿನ ಆತಂಕಕ್ಕೆ ಮುಖ್ಯ ಕಾರಣವಾಗಿದೆ.

ಈ ವೈರಾಣು ರೂಪಾಂತರಿ ಡೆಲ್ಟಾಗಿಂದ ದುಪ್ಪಟ್ಟು ವೇಗವಾಗಿ ಹರಡುತ್ತದೆ ಎಂದು ವಿಶ್ವಸಂಸ್ಥೆ ಹೇಳಿದ್ದರೂ ಡೆಲ್ಟಾಗಿಂತ ಹೆಚ್ಚು ತೀವ್ರತೆ ಹಾಗೂ ಹರಡುವಿಕೆ ಇದಯೇ ಎಂಬುದು ಇನ್ನೂ ದೃಢಪಟ್ಟಿಲ್ಲ.

ಈ ವರೆಗೆ ವರದಿಯಾಗಿರುವ ಪ್ರಕರಣಗಳ ಪ್ರಕಾರ ಓಮಿಕ್ರಾನ್ ಸೋಂಕಿತರಲ್ಲಿ ಒಣಕೆಮ್ಮು, ಜ್ವರ, ರಾತ್ರಿ ವೇಳೆ ಬೆವರು, ತೀವ್ರ ಮೈ-ಕೈ ನೋವು, ಆಯಾಸ ಸಾಮಾನ್ಯ ರೋಗ ಲಕ್ಷಣಗಳಾಗಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com