ತಪ್ಪಿಸಿಕೊಂಡಿದ್ದ ಎಲ್ಲಾ ದಕ್ಷಿಣ ಆಫ್ರಿಕನ್ನರನ್ನು ಪತ್ತೆ ಮಾಡಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ: ಬಿಬಿಎಂಪಿ
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಂತರ ನಾಪತ್ತೆಯಾಗಿದ್ದ ದಕ್ಷಿಣ ಆಫ್ರಿಕಾದ ಎಲ್ಲಾ ಪ್ರಯಾಣಿಕರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ), ಆರೋಗ್ಯ ಮತ್ತು ಪೊಲೀಸ್ ಇಲಾಖೆಗಳ ಅಧಿಕಾರಿಗಳ...
Published: 04th December 2021 05:00 PM | Last Updated: 04th December 2021 05:00 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಂತರ ನಾಪತ್ತೆಯಾಗಿದ್ದ ದಕ್ಷಿಣ ಆಫ್ರಿಕಾದ ಎಲ್ಲಾ ಪ್ರಯಾಣಿಕರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ), ಆರೋಗ್ಯ ಮತ್ತು ಪೊಲೀಸ್ ಇಲಾಖೆಗಳ ಅಧಿಕಾರಿಗಳ ತಂಡ ಕೊನೆಗೂ ಪತ್ತೆ ಹಚ್ಚಿವೆ.
ಕಳೆದ ಎರಡು ವಾರಗಳಲ್ಲಿ ನಗರಕ್ಕೆ ಬಂದಿದ್ದ ಎಲ್ಲ ದಕ್ಷಿಣ ಆಫ್ರಿಕಾದ ಪ್ರಯಾಣಿಕರು ಮತ್ತು ಇತರ ಹೆಚ್ಚಿನ ಅಪಾಯದ ದೇಶಗಳಿಂದ ಬಂದವರನ್ನು ಪತ್ತೆಹಚ್ಚಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಶನಿವಾರ ತಿಳಿಸಿದ್ದಾರೆ.
ಇದನ್ನು ಓದಿ: ಓಮಿಕ್ರಾನ್ ಭೀತಿ: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ 10 ಮಂದಿ ದಕ್ಷಿಣ ಆಫ್ರಿಕಾ ಪ್ರಯಾಣಿಕರು ನಾಪತ್ತೆ!
ಪತ್ತೆಯಾದ ದಕ್ಷಿಣ ಆಫ್ರಿಕಾ ಪ್ರಜೆಗಳನ್ನು ಪ್ರತ್ಯೇಕಿಸಲಾಗಿದೆ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ಸ್ವ್ಯಾಬ್ ಮಾದರಿಗಳನ್ನು ಸಂಗ್ರಹಿಸಿ ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಶುಕ್ರವಾರ ಬೆಳಗ್ಗೆ ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದಿದ್ದ 10 ಮಂದಿ ದಕ್ಷಿಣ ಆಫ್ರಿಕನ್ನರು ನಾಪತ್ತೆಯಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದರು.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಮರು ಪರೀಕ್ಷೆಯೊಂದಿಗೆ ನೆಗೆಟಿವ್ ಆರ್‌ಟಿ-ಪಿಸಿಆರ್ ವರದಿಯ ಅಗತ್ಯವನ್ನು ಕಡ್ಡಾಯಗೊಳಿಸದಿದ್ದಾಗ ಈ ಎಲ್ಲ ಜನರು ಎರಡು ಮೂರು ವಾರಗಳ ಹಿಂದೆ ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದಿದ್ದಾರೆ ಎಂದು ಗೌರವ್ ಗುಪ್ತಾ ಸ್ಪಷ್ಟಪಡಿಸಿದ್ದಾರೆ.