ಓಮ್ರಿಕಾನ್ ಆತಂಕ: ವಿರೋಧದ ನಡುವೆಯೂ ಕಂಟೈನ್ಮೆಂಟ್ ವಲಯಗಳ ಸೀಲ್'ಡೌನ್ ಮಾಡಿದ ಅಧಿಕಾರಿಗಳು!

ಸೋಂಕಿತ ವೈದ್ಯನ ಮನೆ ಬೋರ್ಡ್ ಹಾಕಿ ರಸ್ತೆಯನ್ನು ಸೀಲ್ ಡೌನ್ ಮಾಡಿದ್ದ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಸ್ಥಳೀಯರು ಹಾಗೂ ತಜ್ಞರು ಕಿಡಿಕಾರಿದ್ದು, ಅಧಿಕಾರಿಗಳ ಈ ನಡೆ ಭಾರತೀಯ ವೈದ್ಯಕೀಯ ಸಂಘದ ಜಾರಿಗೆ ತಂದಿರುವ ನಿಯಮದ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.
ರಸ್ತೆಯನ್ನು ಸೀಲ್ಡೌನ್ ಮಾಡಿರುವ ಅಧಿಕಾರಿಗಳು.
ರಸ್ತೆಯನ್ನು ಸೀಲ್ಡೌನ್ ಮಾಡಿರುವ ಅಧಿಕಾರಿಗಳು.

ಬೆಂಗಳೂರು: ಸೋಂಕಿತ ವೈದ್ಯನ ಮನೆ ಬೋರ್ಡ್ ಹಾಕಿ ರಸ್ತೆಯನ್ನು ಸೀಲ್ ಡೌನ್ ಮಾಡಿದ್ದ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಸ್ಥಳೀಯರು ಹಾಗೂ ತಜ್ಞರು ಕಿಡಿಕಾರಿದ್ದು, ಅಧಿಕಾರಿಗಳ ಈ ನಡೆ ಭಾರತೀಯ ವೈದ್ಯಕೀಯ ಸಂಘದ ಜಾರಿಗೆ ತಂದಿರುವ ನಿಯಮದ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿರುವ 46 ವರ್ಷದ ವೈದ್ಯನಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಆರ್‌ಬಿಐ ಲೇಔಟ್‌ನಲ್ಲಿರುವ 6ನೇ ಅಡ್ಡರಸ್ತೆ, 7ನೇ ಮುಖ್ಯ ರಸ್ತೆಯನ್ನು ಸೀಲ್ ಡೌನ್ ಮಾಡಿದ್ದರು.

ವಿರೋಧಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳಉ ಔಪಚಾರಿಕವಾಗಿ ಸೀಲ್ ಡೌನ್ ಮಾಡಲಾಗಿರುವ ಕಂಟೈನ್ಮೆಂಟ್ ಹಾಗೂ ಕ್ಲಸ್ಟರ್ ವಲಯಗಳನ್ನು ತೆರವುಗೊಳಿಸಲಾಗುತ್ತದೆ ಎಂದು ಹೇಳಿದ್ದಾರೆ.

ಯಾರನ್ನೂ ಗುರುತಿಸುವುದು, ಅವಮಾನಿಸುವುದು ಇದರ ಉದ್ದೇಶವಲ್ಲ, ಆದರೆ ಇತರ ನಿವಾಸಿಗಳ ಸುರಕ್ಷತೆಯನ್ನು ಖಚಿತಪಡಿಸುವುದಾಗಿದೆ. ಬೆಂಗಳೂರಿನಲ್ಲಿ 60ಕ್ಕೂ ಹೆಚ್ಚು ಕ್ಲಸ್ಟರ್‌ಗಳಿದ್ದು, ಆದರೂ, ನಾವು ಸುಮ್ಮನಿದ್ದೆವು. ಆದರೆ ಈಗ ಮುಖ್ಯಮಂತ್ರಿಗಳು ಮತ್ತು ಆರೋಗ್ಯ ಸಚಿವರು ಕೂಡ ಜನರು ಜಾಗರೂಕರಾಗಿರಬೇಕು ಮತ್ತು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹೇಳಿದ್ದಾರೆ. ಜನರ ಕೂಡ ಬೇಜವಾಬ್ದಾರಿಯುತವಾಗಿ ವರ್ತಿಸುತ್ತಿದ್ದು, ಹೀಗಾಗಿ ನಾವು ಕಠಿಣ ಕ್ರಮಗಳ ಕೈಗೊಳ್ಳಲೇಬೇಕಾಗಿದೆ ಎಂದು ಹೇಳಿದ್ದಾರೆ.

ಬೊಮ್ಮನಹಳ್ಳಿ ವಲಯದ ಜಂಟಿ ಆಯುಕ್ತ ಎಂ.ರಾಮಕೃಷ್ಣ ಮಾತನಾಡಿ, ಸೋಂಕಿತ ವೈದ್ಯ ಸ್ಥಳದಲ್ಲಿ 7 ದಿನಗಳ ಕಾಲ ನೆಲೆಸುವ ಹಿನ್ನೆಲೆಯಲ್ಲಿ ಗುರುವಾರ ತಡರಾತ್ರಿ ರಸ್ತೆಯನ್ನು ಸೀಲ್ ಮಾಡಲಾಗಿತ್ತು. ಈ ಸ್ಥಳದಲ್ಲಿ ನೆಲೆಸಿರುವ ಜನರಿಗೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

10 ದಿನಗಳಲ್ಲಿ ಬೆಂಗಳೂರು, ಉಪನಗರಗಳಲ್ಲಿ ಶೇ.100ರಷ್ಟು ಲಸಿಕೆ ಗುರಿ ನೀಡಿದ ಅಧಿಕಾರಿಗಳು
ಬೆಂಗಳೂರು ನಗರ ಮತ್ತು ಗ್ರಾಮಾಂತರದ ಜಿಲ್ಲಾಡಳಿತಗಳು ಬಿಬಿಎಂಪಿ ವ್ಯಾಪ್ತಿಯ ಪ್ರದೇಶಗಳಲ್ಲಿ ಅರ್ಹ ಜನಸಂಖ್ಯೆಯ ಎರಡನೇ ಡೋಸ್ ಲಸಿಕೆಯನ್ನು ಪೂರ್ಣಗೊಳಿಸಲು 10 ದಿನಗಳ ಗುರಿಯನ್ನು ನಿಗದಿಪಡಿಸಿದೆ ಎಂದು ತಿಳಿದುಬಂದಿದೆ.

ಈ ಗುರಿ ಸಾಧಿಸಲು, ಜಲಮಂಡಳಿ ಇಲಾಖೆ ನೌಕರರನ್ನು ಇತರೆ ಮುಂಚೂಣಿ ಕಾರ್ಯಕರ್ತರೊಂದಿಗೆ ಒಗ್ಗೂಡಿಸಲಾಗಿದೆ.

ಇದೇ ವೇಳೆ ಮನೆ ಮನೆಗೆ ತೆರಳಿ ಲಸಿಕೆ ಹಾಕುವ ಕಾರ್ಯವನ್ನು ತೀವ್ರಗೊಳಿಸಲಾಗುತ್ತಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ ಮಂಜುನಾಥ್ ಅವರು ಹೇಳಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಅರ್ಹ ಜನಸಂಖ್ಯೆಯ ಶೇ.85ರಷ್ಟು ಜನರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. ಲಸಿಕೆ ಅಭಿಯಾನವನ್ನು ಮತ್ತಷ್ಟು ತೀವ್ರಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com