9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ: ಕಲ್ಯಾಣ ಕರ್ನಾಟಕ ಮಂಡಳಿಗೆ ಪ್ರಸ್ತಾವನೆ

ಡಿಸೆಂಬರ್ 10 ರಂದು ವಿಧಾನಪರಿಷತ್ ಚುನಾವಣೆ ನಡೆಯಲಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಜಿಲ್ಲೆಗಳ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳನ್ನು ಮೊಟ್ಟೆ ವಿತರಿಸುವ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಸೇರಿಸುವ ಪ್ರಸ್ತಾವನೆ ಮತ್ತಷ್ಟು ವಿಳಂಬವಾಗಲಿದೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಡಿಸೆಂಬರ್ 10 ರಂದು ವಿಧಾನಪರಿಷತ್ ಚುನಾವಣೆ ನಡೆಯಲಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಜಿಲ್ಲೆಗಳ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳನ್ನು ಮೊಟ್ಟೆ ವಿತರಿಸುವ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಸೇರಿಸುವ ಪ್ರಸ್ತಾವನೆ ಮತ್ತಷ್ಟು ವಿಳಂಬವಾಗಲಿದೆ. ಇದರ ಜೊತೆಗೆ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ.

ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಗಳಿಂದ ಹಲವಾರು ಮನವಿಗಳ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಿಂದ ಪ್ರಸ್ತಾವನೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚುನಾವಣಾ ನೀತಿ ಸಂಹಿತೆಯಿಂದಾಗಿ ಈಗ ಪ್ರಸ್ತಾವನೆ ಸ್ಥಗಿತಗೊಂಡಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಚುನಾವಣಾ ನೀತಿ ಸಂಹಿತೆಯಿಂದಾಗಿ ಮಂಡಳಿಯು ಯಾವುದೇ ಹೊಸ ಯೋಜನೆಗೆ ಅನುಮೋದನೆಗಳನ್ನು ನೀಡಲು ಸಾಧ್ಯವಿಲ್ಲ ಎಂದು ಅಧಿಕಾರಿ ವಿವರಿಸಿದ್ದಾರೆ.

ಡಿಸೆಂಬರ್ 13 ರಿಂದ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಉನ್ನತ ಅಧಿಕಾರಿಗಳು ಭಾಗವಹಿಸುವುದರಿಂದ, ಈ ಯೋಜನೆ ಜನವರಿಯಲ್ಲಿ ಅನುಷ್ಠಾನಗೊಳಿಸುವ ಸಾಧ್ಯತೆಯಿದೆ.

ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ ಪ್ರಕಾರ, ಯಾದಗಿರಿ, ರಾಯಚೂರು, ಬೀದರ್, ಬಳ್ಳಾರಿ, ಕಲಬುರ್ಗಿ, ಕೊಪ್ಪಳ ಮತ್ತು ವಿಜಯಪುರದಲ್ಲಿ ರಕ್ತಹೀನತೆ ಸೇರಿದಂತೆ ಹೆಚ್ಚಿನ ಅಪೌಷ್ಟಿಕತೆ ಹೊಂದಿರುವ  ಮಕ್ಕಳಿವೆ, ಈ ಏಳು ಜಿಲ್ಲೆಗಳಲ್ಲಿ 1-8 ನೇ ತರಗತಿಯ 14,44,322 ಮಕ್ಕಳಿಗೆ ರಾಜ್ಯ ಸರ್ಕಾರ ಬಿಸಿಯೂಟ ನೀಡುತ್ತಿದೆ ಮೊಟ್ಟೆ ಯೋಜನೆಗೆ ರೂ 39.53 ಕೋಟಿ ವೆಚ್ಚವನ್ನು ಕೇಂದ್ರ ಸರ್ಕಾರ ಭರಿಸಲಿದೆ.

ಮಧ್ಯಾಹ್ನದ ಊಟದ ಯೋಜನೆಗೆ 8 ನೇ ತರಗತಿಯವರೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಹಣ ನೀಡಲಾಗುತ್ತದೆ. ಮೊಟ್ಟೆ ಯೋಜನೆ, ದೊಡ್ಡ ಮಕ್ಕಳಿಗೆ ವಿಸ್ತರಿಸಿದರೆ, ರಾಜ್ಯ ಸರ್ಕಾರದ ಅನುದಾನದ ಅಗತ್ಯವಿರುತ್ತದೆ.

ಹೀಗಾಗಿ ಕಲ್ಯಾಣ ಕರ್ನಾಟಕ ಪ್ರದೇಶದ 9 ಮತ್ತು 10ನೇ ತರಗತಿಯ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಸೇರಿಸಲು ಮಂಡಳಿ ನಿರ್ಧರಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 31 ಜಿಲ್ಲೆಗಳ ಎಲ್ಲಾ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡಲು ಪ್ರಸ್ತಾವನೆಯಿದೆ, ಆದರೆ ಲಿಂಗಾಯತ ಸಂಘಟನೆಗಳು ವಿರೋಧ ವ್ಯಕ್ತ ಪಡಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com