ದಕ್ಷಿಣ ಆಫ್ರಿಕಾದಿಂದ ಬಂದ ಪ್ರಯಾಣಿಕರ ಮಾದರಿ ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ರವಾನೆ!

ಬೆಂಗಳೂರಿಗೆ ಬುಧವಾರ ಬಂದಿಳಿದ ದಕ್ಷಿಣ ಆಫ್ರಿಕಾದ ಪ್ರಯಾಣಿಕರೊಬ್ಬರಿಗೆ ಕೋವಿಡ್-19 ಪಾಸಿಟಿವ್ ಬಂದಿದ್ದು, ಅವರ ಸ್ವ್ಯಾಬ್ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಬೆಂಗಳೂರಿಗೆ ಬುಧವಾರ ಬಂದಿಳಿದ ದಕ್ಷಿಣ ಆಫ್ರಿಕಾದ ಪ್ರಯಾಣಿಕರೊಬ್ಬರಿಗೆ ಕೋವಿಡ್-19 ಪಾಸಿಟಿವ್ ಬಂದಿದ್ದು, ಅವರ ಸ್ವ್ಯಾಬ್ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.

ವ್ಯಕ್ತಿ ಅಪಾಯಕಾರಿ ರಾಷ್ಟ್ರದಿಂದ ಬಂದವರಾಗಿರುವ ಹಿನ್ನೆಲೆಯಲ್ಲಿ ಸ್ವ್ಯಾಬ್ ಮಾದರಿಯನ್ನು ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಕಳುಹಿಸಲಾಗಿದೆ. ವ್ಯಕ್ತಿಯನ್ನು ಐಸೋಲೇಷನ್ ನಲ್ಲಿ ಇರಿಸಲಾಗಿದೆ. ವ್ಯಕ್ತಿಯಲ್ಲಿ ಸೌಮ್ಯ ಲಕ್ಷಣಗಳು ಕಂಡು ಬಂದಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಮತ್ತು ವಿಮಾನದಲ್ಲಿ ಸೋಂಕಿತ ವ್ಯಕ್ತಿಯ ಸಂಪರ್ಕಿತರನ್ನು ಪತ್ತೆ ಮಾಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಸೋಂಕಿತ ವ್ಯಕ್ತಿ ಎರಡು ಡೋಸ್ ಲಸಿಕೆಯನ್ನು ಪಡೆದುಕೊಂಡಿದ್ದು, ನೆಗೆಟಿವ್ ರಿಪೋರ್ಟ್ ನೊಂದಿಗೆ ವಿಮಾನದಲ್ಲಿ ಪ್ರಯಾಣಿಸಿದ್ದರು. ಆದರೆ, ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ. ಜೀನೋಮ್ ಸೀಕ್ವೆನ್ಸಿಂಗ್ ವರದಿ ಬರುವವರೆಗೂ ಸೋಂಕಿತ ವ್ಯಕ್ತಿಯನ್ನು ಐಸೋಲೇಷನ್ ನಲ್ಲಿಟ್ಟು, ನಿಗಾ ಇರಿಸಲಾಗಿದೆ ಎಂದು ಆರೋಗ್ಯಾಧಿಕಾರಿಗಳು ಹೇಳಿದ್ದಾರೆ.

ಐವರ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ. ವಾರಾಂತ್ಯದೊಳಗೆ ವರದಿ ನೀಡುವಂತೆ ಮನವಿ ಮಾಡಿಕೊಳ್ಳಲಾಗಿದೆ. ಈ ಹಿಂದೆ ಜಿನೋಮ್ ಸೀಕ್ವೆನ್ಸಿಂಗ್ ವೈದ್ಯಕೀಯ ವರದಿ ಬರಲು ಎರಡು ವಾರಗಳ ಕಾಲ ಬೇಕಾಗುತ್ತಿತ್ತು. ಇದೀಗ ಒಂದು ವಾರದ ಸಮಯ ತೆಗೆದುಕೊಳ್ಳಲಾಗುತ್ತಿದೆ ಎಂದು ಗುಪ್ತಾ ಅವರು ಹೇಳಿದ್ದಾರೆ.

ಈ ಐದು ಮಾದರಿಗಳು ಸೋಂಕಿತ ವೈದ್ಯನೊಂದಿಗಿನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರಾಗಿದ್ದಾರೆಂದು ಮಾಹಿತಿ ನೀಡಿದ್ದಾರೆ.

ಈ ನಡುವೆ ವೈದ್ಯನ ಹೊರತುಪಡಿಸಿ, ಜಿನೋಮ್ ಪರೀಕ್ಷೆಯ ಫಲಿತಾಂಶಗಳು ಬರುವ ಮೊದಲು ದುಬೈಗೆ ಹಾರಿರುವ ದಕ್ಷಿಣ ಆಫ್ರಿಕಾದ ಮತ್ತೊಬ್ಬ ಪ್ರಯಾಣಿಕನ ವೈದ್ಯಕೀಯ ವರದಿ ಪಾಸಿಟಿವ್ ಬಂದಿದೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com