ತಜ್ಞರೊಂದಿಗೆ ಚರ್ಚಿಸಿ ಮಾಲ್, ಥಿಯೇಟರ್ ಗಳಲ್ಲಿ ಶೇ.50 ಮಿತಿ ಜಾರಿ: ಸಿಎಂ ಬೊಮ್ಮಾಯಿ

ಕೋವಿಡ್-19 ನ ಓಮಿಕ್ರಾನ್ ರೂಪಾಂತರಿ ಭೀತಿಯ ನಡುವೆ ರಾಜ್ಯದಲ್ಲಿ ಮಾಲ್, ಥಿಯೇಟರ್ ಹಾಗೂ ಇನ್ನಿತರ ಸಾರ್ವಜನಿಕ ಪ್ರದೇಶಗಳಲ್ಲಿ ಶೇ.50 ರಷ್ಟು ಮಿತಿ ಜಾರಿಗೊಳಿಸುವ ಬಗ್ಗೆ ಚರ್ಚೆಯಾಗುತ್ತಿದೆ. 
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಕೋವಿಡ್-19 ನ ಓಮಿಕ್ರಾನ್ ರೂಪಾಂತರಿ ಭೀತಿಯ ನಡುವೆ ರಾಜ್ಯದಲ್ಲಿ ಮಾಲ್, ಥಿಯೇಟರ್ ಹಾಗೂ ಇನ್ನಿತರ ಸಾರ್ವಜನಿಕ ಪ್ರದೇಶಗಳಲ್ಲಿ ಶೇ.50 ರಷ್ಟು ಮಿತಿ ಜಾರಿಗೊಳಿಸುವ ಬಗ್ಗೆ ಚರ್ಚೆಯಾಗುತ್ತಿದೆ. 

ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ತಜ್ಞರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಓಮಿಕ್ರಾನ್ ಸೇರಿದಂತೆ ಕೋವಿಡ್-19 ಪ್ರಕರಣಗಳಲ್ಲಿ ಗಣನೀಯವಾಗಿ ಏರಿಕೆ ಕಂಡುಬರುತ್ತಿದ್ದು   ಇದು ಮೂರನೇ ಅಲೆಗೆ ದಾರಿ ಮಾಡಿಕೊಡಬಹುದಾಗಿದ್ದು ಸೋಂಕು ಪ್ರಸರಣ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ತಜ್ಞರು ಸಲಹೆ ನೀಡಿದ್ದಾರೆ.

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕೋವಿಡ್-19 ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಮೂರನೇ ಅಲೆಯ ಭೀತಿಯನಡುವೆ ಆರೋಗ್ಯ ಇಲಾಖೆ ಹಲವು ಜಿಲ್ಲೆಗಳಲ್ಲಿ ಸೋಂಕು ಪತ್ತೆ ಪರೀಕ್ಷೆಯ ಸಂಖ್ಯೆಯನ್ನು ಹೆಚ್ಚಿಸಿದೆ. ಕಳೆದ 2 ವಾರಗಳಲ್ಲಿ ಶಾಲಾ-ಕಾಲೇಜುಗಳಲ್ಲಿನ ವಿದ್ಯಾರ್ಥಿಗಳಲ್ಲಿ ಹೆಚ್ಚು ಸೋಂಕು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಆಫ್ ಲೈನ್ ತರಗತಿಗಳನ್ನು ನಿಲ್ಲಿಸಲು ಒತ್ತಾಯ ಮಾಡಲಾಗುತ್ತಿದೆ. 

ಪರಿಷತ್ ಚುನಾವಣೆ ಪ್ರಚಾರ ಸಭೆಯ ಹಿನ್ನೆಲೆಯಲ್ಲಿ ಗದಗ ಹಾಗೂ ಹಾವೇರಿಗಳಲ್ಲಿ ಬಿಜೆಪಿ ಸಭೆಯಲ್ಲಿ ಪಾಲ್ಗೊಳ್ಳುವುದಕ್ಕೂ ಮೊದಲು ಮಾಧ್ಯಮಗಳೊಂದಿಗೆ ಸಿಎಂ ಮಾತನಾಡುತ್ತಿದ್ದರು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com