ಓಮಿಕ್ರಾನ್ ಆತಂಕ: ಬೆಂಗಳೂರು, ಚಿಕ್ಕಮಗಳೂರಿನಲ್ಲಿ ಕ್ಲಸ್ಟರ್ ಮಾದರಿ ಕೋವಿಡ್ ಕೇಸ್ ಪತ್ತೆ!

ಕೋವಿಡ್ ರೂಪಾಂತರಿ ತಳಿ ಓಮಿಕ್ರಾನ್ ಸೋಂಕು ಬಗ್ಗೆ ಹೆಚ್ಚುತ್ತಿರುವ ಆತಂಕದ ನಡುವೆ, ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ಸೀಗೋಡು ಜವಾಹರ್ ನವೋದಯ ವಸತಿ ಶಾಲೆಯಲ್ಲಿ 70 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು/ಚಿಕ್ಕಮಗಳೂರು: ಕೋವಿಡ್ ರೂಪಾಂತರಿ ತಳಿ ಓಮಿಕ್ರಾನ್ ಸೋಂಕು ಬಗ್ಗೆ ಹೆಚ್ಚುತ್ತಿರುವ ಆತಂಕದ ನಡುವೆ, ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ಸೀಗೋಡು ಜವಾಹರ್ ನವೋದಯ ವಸತಿ ಶಾಲೆಯಲ್ಲಿ 70 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ದೊಡ್ಡ ಕ್ಲಸ್ಟರ್ ಪತ್ತೆಯಾದಂತಾಗಿದೆ. ಇದರ ಜೊತೆಗೆ ಬೆಂಗಳೂರಿನ ಆನೇಕಲ್ ಹಾಗೂ ವೈಟ್ ಫೀಲ್ಡ್ ನಲ್ಲಿರುವ ಶಿಕ್ಷಣ ಸಂಸ್ಥೆಯೊಂದರಲ್ಲಿಯೂ 12 ಮಂದಿಯಲ್ಲಿ ಸೋಂಕು ಪತ್ತೆಯಾಗಿರುವುದು ಕಂಡು ಬಂದಿದೆ.

ಈ ಮೂಲಕ ಲದೆ 12 ದಿನಗಳಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿನ ಒಟ್ಟು 501 ಮಂದಿಗೆ ಸೋಂಕು ತಗುಲಿದಂತಾಗಿದೆ.

ನವೆಂಬರ್ 26 ರಂದು ಪರೀಕ್ಷೆಗೊಳಪಡಿಸಿದ್ದ ಎಲ್ಲಾ ಪಾರ್ಥಮಿಕ ಸಂಪರ್ಕಿತರ ವೈದ್ಯಕೀಯ ವರದಿ ಪಾಸಿಟಿವ್ ಬಂದಿದೆ. ಇದೀಗ ಎಲ್ಲರನ್ನೂ ಐಸೋಲೇಷನ್ ನಲ್ಲಿ ಇರಿಸಲಾಗಿದೆ. ಎರಡನೇ ಸುತ್ತಿನ ಪರೀಕ್ಷೆಯನ್ನು 7ನೇ ದಿನದಂತು ನಡೆಸಲಾಗುತ್ತದೆ ಎಂದು ಬೆಂಗಳೂರು ನಗರ ಆಡಳಿತದ ಅಧಿಕಾರಿಗಳು ಹೇಳಿದ್ದಾರೆ.

ಚಿಕ್ಕಮಗಳೂರಿನ ಜವಾಹರ್ ನವೋದಯ ವಿಜ್ಯಾಲಯದಲ್ಲಿ 62 ಮಂದಿಗೆ, ಬೆಂಗಳೂರು ನಗರ ಜಿಲ್ಲೆಯ ಆನೇಕರ್ ತಾಲೂಕಿನ ಸ್ಫೂರ್ತಿ ನರ್ಸಿಂಗ್ ಕಾಲೇಜಿನಲ್ಲಿ 7 ಮತ್ತು ದಿ ಇಂಟರ್ ನ್ಯಾಶನಲ್ ಸ್ಕೂಲಿನಲ್ಲಿ 5 ಮಂದಿಗೆ ಸೋಂಕು ತಗುಲಿದೆ.

ಬೆಂಗಳೂರಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿನ ಔಷಧ ತಯಾರಿಕಾ ಕಾರ್ಖಾನೆಯಲ್ಲಿ ಮೂರು ಪ್ರಕರಣಗಳ ಜೊತಗೆ ಸಣ್ಣ ಕ್ಲಸ್ಟರ್'ವೊಂದು ವರದಿಯಾಗಿದೆ.

ಮೂವರಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕಾರ್ಖಾನೆಯ ಭದ್ರತಾ ಸಿಬ್ಬಂದಿಗಳು ಹಾಗೂ ಇತರೆ ಸಿಬ್ಬಂದಿಗಳಿಗೆ ಬೆಂಗಳೂರು ಜಿಲ್ಲಾ ಆಡಳಿತ ಮಂಡಳಿಯ ಅಧಿಕಾರಿಗಳು ಕೋವಿಡ್ ಪರೀಕ್ಷೆ ನಡೆಸುತ್ತಿದ್ದು, ಸೋಂಕಿತರನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

255 ಮಂದಿ ಸಿಬ್ಬಂದಿಗಳಿಗೆ ರ್ಯಾಂಡಮ್ ಪರೀಕ್ಷೆಗಳನ್ನು ನಡೆಸಲಾಗಿದೆ. ಕಾರ್ಖಾನೆಗಳನ್ನು ಬಂದ್ ಮಾಡಿಲ್ಲ. ಇದರ ಬದಲಿಗೆ ಸ್ಯಾನಿಟೈಸ್ ಮಾಡಲಾಗುತ್ತಿದೆ. ಶಿಫ್ಟ್ ಗಳಲ್ಲಿ ಕಾರ್ಖಾನೆ ಕಾರ್ಯನಿರ್ವಹಿಸಲಿದೆ ಎಂದು ಬಿಬಿಎಂಪಿ ಅಧಇಕಾರಿಗಳು ಹೇಳಿದ್ದಾರೆ.

ಮೊದಲ ಓಮಿಕ್ರಾನ್ ಸೋಂಕಿತನ ಸಂಪರ್ಕತಲ್ಲಿದ್ದ 35 ಮಂದಿಯಲ್ಲಿ ಕೋವಿಡ್ ನೆಗೆಟಿವ್

ದೇಶದಲ್ಲಿ ಮೊದಲ ಬಾರಿಗೆ ಓಮಿಕ್ರಾನ್ ಸೋಂಕಿಗೊಳಗಾಗಿದ್ದ ವ್ಯಕ್ತಿಯ ಜೊತೆಗಿದ್ದ 35 ಮಂದಿಯ ಕೋವಿಡ್ ಪರೀಕ್ಷೆ ನೆಗೆಟಿವ್ ಬಂದಿದೆ ಎಂದು ತಿಳಿದುಬಂದಿದೆ.

35 ಮಂದಿ ಹೋಟೆಲ್ ಸಿಬ್ಬಂದಿ, ಆಸ್ಪತ್ರೆಯ ಸಿಬ್ಬಂದಿಗಳು, ತಾಂತ್ರಿಕ ಸಿಬ್ಬಂದಿಗಳಾಗಿದ್ದು, ಎಲ್ಲರ ವರದಿ ನೆಗೆಟಿವ್ ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ನಡುವೆ ನಗರದ ಕೋವಿಡ್ ಕಂಟೈನ್ಮೆಟ್ ಝೋನ್ ಗಳ ಸಂಖ್ಯೆ 75ಕ್ಕೆ ಏರಿಕೆಯಾಗಿದ್ದು, ಬೊಮ್ಮನಹಳ್ಳಿಯಲ್ಲಿ ಗರಿಷ್ಟ 27 ಕಂಟೈನ್ಮೆಂಟ್ ಝೋನ್ ಗಳಿವೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com