ಓಮಿಕ್ರಾನ್ ವಿರುದ್ಧದ ದಿಟ್ಟ ಹೋರಾಟಕ್ಕೆ ಖಾಸಗಿ ಪ್ರಯೋಗಾಲಯಗಳ ಸಂಖ್ಯೆ ಹೆಚ್ಚಳ ಅಗತ್ಯವಿದೆ: ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ

ರಾಜ್ಯದಲ್ಲಿ ಈಗಾಗಲೇ ಕಾಲಿಟ್ಟು ಆತಂಕ ಸೃಷ್ಟಿಸಿರುವ ಹೆಮ್ಮಾರಿ ಓಮಿಕ್ರಾನ್ ರೂಪಾಂತರಿ ವೈರಸ್ ವಿರುದ್ಧ ದಿಟ್ಟ ಹೋರಾಟ ಮಾಡಲು ಖಾಸಗಿ ಪ್ರಯೋಗಾಲಯಗಳ ಸಂಖ್ಯೆ ಹೆಚ್ಚಿಸಿ, ಪರೀಕ್ಷೆಗಳನ್ನು ಹೆಚ್ಚಿಸುವುದು ಅತ್ಯಗತ್ಯವಾಗಿದೆ ಎಂದು ತಾಂತ್ರಿಕ ಸಲಹಾ ಸಮಿತಿಯ ತಜ್ಞರು ಸರ್ಕಾರಕ್ಕೆ ತಿಳಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಕಾಲಿಟ್ಟು ಆತಂಕ ಸೃಷ್ಟಿಸಿರುವ ಹೆಮ್ಮಾರಿ ಓಮಿಕ್ರಾನ್ ರೂಪಾಂತರಿ ವೈರಸ್ ವಿರುದ್ಧ ದಿಟ್ಟ ಹೋರಾಟ ಮಾಡಲು ಖಾಸಗಿ ಪ್ರಯೋಗಾಲಯಗಳ ಸಂಖ್ಯೆ ಹೆಚ್ಚಿಸಿ, ಪರೀಕ್ಷೆಗಳನ್ನು ಹೆಚ್ಚಿಸುವುದು ಅತ್ಯಗತ್ಯವಾಗಿದೆ ಎಂದು ತಾಂತ್ರಿಕ ಸಲಹಾ ಸಮಿತಿಯ ತಜ್ಞರು ಸರ್ಕಾರಕ್ಕೆ ತಿಳಿಸಿದ್ದಾರೆ.

ಓಮಿಕ್ರಾನ್ ವಿರುದ್ಧ ಹೋರಾಡಲು ಜೀನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗಳನ್ನು ಹೆಚ್ಚೆಚ್ಚು ನಡೆಸಬೇಕು. ಇದಕ್ಕಾಗಿ ಪ್ರಯೋಗಾಲಯಗಳ ಸಂಖ್ಯೆ ಹೆಚ್ಚಿಸುವುದು ಮುಖ್ಯವಾಗಿದೆ ಎಂದು ಸಮಿತಿಯ ಸದಸ್ಯರು ಹೇಳಿದ್ದಾರೆಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ಪ್ರಸ್ತುತ ನಾಲ್ಕು ಸರ್ಕಾರಿ ಪ್ರಯೋಗಾಲಯಗಳಿದ್ದು, ಅದರಲ್ಲಿ ಎರಡು ಜಿಲ್ಲಾ ಪ್ರಯೋಗಾಲಯಗಳಿವೆ, ಇದರ ಜೊತೆಗೆ ಮತ್ತೆರಡು ಖಾಸಗಿ ಪ್ರಯೋಗಾಲಯಗಳ ಸೇರ್ಪಡೆಗೊಳಿಸುವಂತೆ ಸಲಹೆ ನೀಡಲಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಕೊರೋನಾ 2ನೇ ಅಲೆ ವೇಳೆ ರಾಜ್ಯ ಸರ್ಕಾರ ಬೌರಿಂಗ್ ಆಸ್ಪತ್ರೆ, ಮೈಸೂರು ವೈದ್ಯಕೀಯ ಕಾಲೇಜು, ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆ, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ವಿಜಯಪುರ ಮತ್ತು ಮಂಗಳೂರಿನಲ್ಲಿ ಎರಡು ಪ್ರಯೋಗಾಲಯಗಳನ್ನು ಸ್ಥಾಪಿಸಿತ್ತು. ಈ ಪ್ರಯೋಗಾಲಗಳು ಕಾರ್ಯನಿರ್ವಹಿಸಿದರೆ ಸಾಕು ಎಂಬುದು ತಜ್ಞರ ಅಭಿಪ್ರಾಯವಾಗಿದೆ.

ಪ್ರಯೋಗಾಲಯಗಳಲ್ಲಿ ಉಪಕರಣಗಳನ್ನು ಅಳವಡಿಸಲಾಗಿದ್ದರೂ, ಅವುಗಳನ್ನು ಕಾರ್ಯಗತಗೊಳಿಸಲು ತಾಂತ್ರಿಕ ಸಿಬ್ಬಂದಿಯನ್ನು ನೇಮಿಸುವುದು ಮತ್ತು ತರಬೇತಿಯನ್ನು ನೀಡುವುದು ಅವಶ್ಯಕ ಎಂದು ಆರೋಗ್ಯ ಇಲಾಖೆಯ ಮೂಲಗಳು ಹೇಳಿವೆ. ಈ ನಡುವೆ ಈ ಕುರಿತ ಪ್ರಕ್ರಿಯೆಗಳನ್ನು ತ್ವರಿತಗೊಳಿಸುವಂತೆ ತಜ್ಞರು ಕರೆ ಸರ್ಕಾರಕ್ಕೆ ತಿಳಿಸಿದ್ದಾರೆ.

ಆದರೆ, ಖಾಸಗಿ ಪ್ರಯೋಗಾಲಯಗಳನ್ನು INSACOG ಅಡಿಯಲ್ಲಿ ಸೇರಿಸುವ ಬಗ್ಗೆ ಕೇಂದ್ರವು ಇನ್ನೂ ನಿರ್ಧಾರ ತೆಗೆದುಕೊಳ್ಳದಿರುವುದರಿಂದ, ರಾಜ್ಯ ಸರ್ಕಾರವು ಅನುಮೋದನೆಗಾಗಿ ಕಾಯಬೇಕಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com