ಬೆಂಗಳೂರು: ಜರ್ಮನಿಯ ಪ್ರವಾಸಿ ಮಹಿಳೆಗೆ ಕೋವಿಡ್-19 ಪಾಸಿಟಿವ್ ದೃಢ

 ಜರ್ಮನಿಯಿಂದ ಬೆಂಗಳೂರಿಗೆ ಬಂದಿದ್ದ ಪ್ರವಾಸಿ ಮಹಿಳೆಯೊಬ್ಬರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿರುವುದಾಗಿ ಬಿಬಿಎಂಪಿ ಆರೋಗ್ಯಾಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಜರ್ಮನಿಯಿಂದ ಬೆಂಗಳೂರಿಗೆ ಬಂದಿದ್ದ ಪ್ರವಾಸಿ ಮಹಿಳೆಯೊಬ್ಬರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿರುವುದಾಗಿ ಬಿಬಿಎಂಪಿ ಆರೋಗ್ಯಾಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಬೆಂಗಳೂರಿನ ಫೈವ್ ಸ್ಟಾರ್ ಹೋಟೆಲ್ ನಲ್ಲಿ ತಂಗಿದ್ದ ಮಹಿಳೆಗೆ ಟೆಸ್ಟ್ ವರದಿ ಬಂದ ನಂತರ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಹೋಟೆಲ್ ನಲ್ಲಿ ಪ್ರವಾಸಿ ಮಹಿಳೆಯ ವಿವರವನ್ನು ತಂಡ ತೆಗೆದುಕೊಂಡಿದ್ದು, ಆಸ್ಪತ್ರೆಯಲ್ಲಿ ರೋಗಿಯೊಂದಿಗೆ ಮಾತನಾಡಿದ್ದೇವೆ, ಆಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಾಗ ವರದಿಯಲ್ಲಿತ್ತು ಹಾಗೂ ಅವರು ಯಾವಾಗ ಬೆಂಗಳೂರಿಗೆ ಆಗಮಿಸಿದ್ದರು ಎಂಬುದರ ಬಗ್ಗೆ ತಪಾಸಣೆ ಮಾಡಲಾಗುತ್ತಿರುವುದಾಗಿ ಬಿಬಿಎಂಪಿ ಆರೋಗ್ಯ ಅಧಿಕಾರಿ ತಿಳಿಸಿದ್ದಾರೆ. 

ಪ್ರವಾಸಿ ಮಹಿಳೆಯ ಸ್ಯಾಂಪಲ್ ಗಳನ್ನು ಜಿನೋಮ್ ಸಿಕ್ವೆನ್ಸಿಂಗ್ ಗಾಗಿ ಕಳುಹಿಸಲಾಗುವುದು ಎಂದು ತಿಳಿಸಿದ ಅಧಿಕಾರಿ, ಯಾರಾದರೂ ನಿಯಮ ನಿಯಮ ಉಲ್ಲಂಘಿಸಿರುವುದು ಕಂಡುಬಂದಲ್ಲಿ ಅಂತವರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ ಮತ್ತು ಸಾಂಕ್ರಾಮಿಕ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ. 

ಎಲ್ಲಾ ವಿದೇಶಿ ಪ್ರಯಾಣಿಕರಿಗೂ ಲಸಿಕೆ ಪಡೆದಿರುವ ವರದಿ ಹಾಗೂ ಆರ್ ಟಿ- ಪಿಸಿಆರ್ ನೆಗೆಟಿವ್ ವರದಿಯನ್ನು ರಾಜ್ಯ ಸರ್ಕಾರ ಕಡ್ಡಾಯಪಡಿಸಿದೆ. ವಿಮಾನ ನಿಲ್ದಾಣಕ್ಕೆ ಬಂದಾಗ ಟೆಸ್ಟ್ ಕೂಡಾ ಮಾಡಿಸಬೇಕಾಗುತ್ತದೆ. ಆದ್ದರಿಂದ ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆ ಇದೀಗ ಎಲ್ಲಾ ವಿವರಗಳನ್ನು ಪರಿಶೀಲಿಸುತ್ತಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com