ತುಮಕೂರಿನ ಮತ್ತೊಂದು ನರ್ಸಿಂಗ್ ಕಾಲೇಜ್ ಇದೀಗ ಕೋವಿಡ್ ಕ್ಲಸ್ಟರ್ 

ತುಮಕೂರಿನ ಅರುಣ ನರ್ಸಿಂಗ್ ಕಾಲೇಜಿನಲ್ಲಿ ಸೋಮವಾರ ಮೂರು ಕೋವಿಡ್-19 ಪ್ರಕರಣಗಳು ವರದಿಯಾಗುವುದರೊಂದಿಗೆ ಜಿಲ್ಲೆಯಲ್ಲಿನ ಕ್ಲಸ್ಟರ್ ಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ತುಮಕೂರು: ತುಮಕೂರಿನ ಅರುಣ ನರ್ಸಿಂಗ್ ಕಾಲೇಜಿನಲ್ಲಿ ಸೋಮವಾರ ಮೂರು ಕೋವಿಡ್-19 ಪ್ರಕರಣಗಳು ವರದಿಯಾಗುವುದರೊಂದಿಗೆ ಜಿಲ್ಲೆಯಲ್ಲಿನ ಕ್ಲಸ್ಟರ್ ಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. 

ಕೇರಳದಿಂದ ಬಂದಿದ್ದ ಮೂವರು ವಿದ್ಯಾರ್ಥಿನಿಯರಲ್ಲಿ ಕೋವಿಡ್ ಪಾಸಿಟಿವ್ ದೃಢಪಡುವುದರೊಂದಿಗೆ ಮೂರು ಕಾಲೇಜಿಗಳಲ್ಲಿ ಪ್ರಕರಣಗಳ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಈ ಹಿಂದೆ ಸಿದ್ದಗಂಗಾ ನರ್ಸಿಂಗ್ ಕಾಲೇಜಿನಲ್ಲಿ 8, ವರದರಾಜ ಕಾಲೇಜಿನಲ್ಲಿ ಏಳು ಪ್ರಕರಣಗಳು ವರದಿಯಾಗಿದ್ದವು. ಇದರಿಂದ ಕಾಲೇಜ್ ಮತ್ತು ಹಾಸ್ಟೆಲ್ ಗಳು ಮುಚ್ಚಲ್ಪಟ್ಟಿದ್ದವು. ಅಲ್ಲದೇ, ಕಂಟೈನ್ ಮೆಂಟ್ ವಲಯ ಎಂದು ಘೋಷಿಸಲಾಗಿತ್ತು.

ಜಿಲ್ಲಾ ಆರೋಗ್ಯಾಧಿಕಾರಿ ಎಂ.ಬಿ. ನಾಗೇಂದ್ರಪ್ಪ ಪ್ರಕಾರ, 650 ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಪರೀಕ್ಷೆ ನಡೆಸಲಾಗಿದ್ದು, 40 ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್ ಗಾಗಿ ಬೆಂಗಳೂರಿಗೆ ಕಳುಹಿಸಾಗಿದೆ. ಪೆರುಮನಹಳ್ಳಿಯಲ್ಲಿ 11 ಜನರಿಗೆ ಕೋವಿಡ್-19 ಸೋಂಕು ತಗುಲಿದ್ದು, ಆ ಹಳ್ಳಿಯನ್ನು ಕಂಟೈನ್ ಮೆಂಟ್ ವಲಯ ಎಂದು ಘೋಷಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com