ವಕ್ಫ್ ಮಂಡಳಿ ಜಮೀನು ರಕ್ಷಿಸಿ ಇಲ್ಲವೇ ರಾಜಿನಾಮೆ ನೀಡಿ: ಶಶಿಕಲಾ ಜೊಲ್ಲೆಗೆ ಅನ್ವರ್ ಮಾಣಿಪ್ಪಾಡಿ ಎಚ್ಚರಿಕೆ

ವಕ್ಫ್ ಬೋರ್ಡ್ ಆಸ್ತಿಗಳನ್ನು ರಕ್ಷಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಹಾಗೂ ರಾಜ್ಯ ಬಿಜೆಪಿ ಜಂಟಿ ವಕ್ತಾರ ಅನ್ವರ್ ಮಾಣಿಪ್ಪಾಡಿ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆಗೆ ಆಗ್ರಹಿಸಿದ್ದಾರೆ.
ಅನ್ವರ್ ಮಾನಿಪ್ಪಾಡಿ
ಅನ್ವರ್ ಮಾನಿಪ್ಪಾಡಿ

ಬೆಂಗಳೂರು: ವಕ್ಫ್ ಬೋರ್ಡ್ ಆಸ್ತಿಗಳನ್ನು ರಕ್ಷಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಹಾಗೂ ರಾಜ್ಯ ಬಿಜೆಪಿ ಜಂಟಿ ವಕ್ತಾರ ಅನ್ವರ್ ಮಾಣಿಪ್ಪಾಡಿ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆಗೆ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  2013 ರ ವರದಿಯನ್ನು ಆಧರಿಸಿ ತನಿಖೆ ನಡೆಸಲು ಮತ್ತು ವಿಷಯವನ್ನು ಅದರ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ನಿವೃತ್ತ ನ್ಯಾಯಾಧೀಶರನ್ನು ನೇಮಿಸಬೇಕೆಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ರಾಜ್ಯ ಸರ್ಕಾರವು ಎಲ್ಲಾ ರಂಗಗಳಲ್ಲಿ ಅಲ್ಪಸಂಖ್ಯಾತರ ಸಮಸ್ಯೆಗಳನ್ನು ಪರಿಹರಿಸಲು ವಿಫಲವಾಗಿದೆ ಮತ್ತು ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ‘ಸಬ್ಕಾ ಸಾಥ್ ಸಬ್ಕಾ ವಿಕಾಸ್’ ಪರಿಕಲ್ಪನೆಯನ್ನು ವಿಫಲಗೊಳಿಸಿದೆ ಎಂದು ಆರೋಪಿಸಿದ್ದಾರೆ.  ಈ ವಿಚಾರವನ್ನು ತಾವು  ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತ ಮುಕುಂದ್ ಅವರ ಗಮನಕ್ಕೆ ತಂದಿರುವುದಾಗಿ ತಿಳಿಸಿದ್ದಾರೆ.

2.5 ಲಕ್ಷ ಕೋಟಿಗೂ ಅಧಿಕ ಮೌಲ್ಯದ ವಕ್ಫ್ ಆಸ್ತಿಗಳನ್ನು ಸಂರಕ್ಷಿಸಲು ಬೇಕಾದ ಹಣಕ್ಕೆ ಕೊರತೆಯಿದೆ ಎಂದು ಹೇಳಿದ್ದಾರೆ.  ಆಸ್ತಿಯನ್ನು ರಕ್ಷಿಸಲು ಸಾಧ್ಯವಾಗದಿದ್ದರೆ,  ಶಶಿಕಲಾ ಜೊಲ್ಲೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕುಎಂದು ಅವರು ಒತ್ತಾಯಿಸಿದ್ದಾರೆ.

ಜಗದೀಶ್ ಶೆಟ್ಟರ್ ಸಚಿವ ಸಂಪುಟ ನನ್ನ ವರದಿಗೆ ಅನುಮೋದನೆ ನೀಡಿತ್ತು. ಆದರೆ ಅಸೆಂಬ್ಲಿಯಲ್ಲಿ ಮಂಡನೆ ಆಗಿಲ್ಲ,ಅಲ್ಲದೆ ಯಾವುದೇ ಕ್ರಮ ಕೈಗೊಂಡಿಲ್ಲ. ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಕ್ರಮ ಕೈಗೊಳ್ಳುವ ಬದಲು ಕೇವಲ ತುಟಿಗೆ ತುಪ್ಪ ಸವರಿದರು ಎಂದು ವಾಗ್ದಾಳಿ ನಡೆಸಿದರು.

ಕಾನೂನು ಮತ್ತು ಸಂಸದೀ ವ್ಯವಹಾರಗಳ ಸಚಿವ ಮಾಧುಸ್ವಾಮಿ ಅವರ ವಿರುದ್ದವೂ ವಾಗ್ದಾಳಿ ನಡೆಸಿದರು.  ಮೈಸೂರಿನಲ್ಲಿ ವಕ್ಫ್ ಆಸ್ತಿಯನ್ನು ಅಡಮಾನವಿಡಲಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್‌ನಲ್ಲಿ ವಕ್ಫ್ ಆಸ್ತಿಯನ್ನು ಮಾರಾಟ ಮಾಡಿರುವ ಬಗ್ಗೆಯೂ ಅವರು ಪ್ರಸ್ತಾಪಿಸಿದರು.ಬೆಂಗಳೂರು ಸಮೀಪದ ದೊಡ್ಡನಾಗಮಂಗಲದಲ್ಲಿ ಮುಸಲ್ಮಾನರಿಗೂ ಸ್ಮಶಾನವನ್ನು ನಿರಾಕರಿಸಲಾಗುತ್ತಿದೆ" ಎಂದು ದೂರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com