ಬೆಂಗಳೂರು: ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ; ಇಬ್ಬರ ಬಂಧನ

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮತ್ತು ಕಾನ್‌ಸ್ಟೆಬಲ್ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಇಂಜಿನಿಯರ್ ಸೇರಿದಂತೆ ಇಬ್ಬರನ್ನು ಯಲಹಂಕ ನ್ಯೂ ಟೌನ್ ಪೊಲೀಸರು ಬಂಧಿಸಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮತ್ತು ಕಾನ್‌ಸ್ಟೆಬಲ್ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಇಂಜಿನಿಯರ್ ಸೇರಿದಂತೆ ಇಬ್ಬರನ್ನು ಯಲಹಂಕ ನ್ಯೂ ಟೌನ್ ಪೊಲೀಸರು ಬಂಧಿಸಿದ್ದಾರೆ. 

ಆರೋಪಿಗಳು ಯಲಹಂಕ ನಿವಾಸಿಗಳಾಗಿದ್ದು, ಗಸ್ತು ತಿರುಗುತ್ತಿದ್ದಾಗ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಶ್ರೀಶೈಲ ಮತ್ತು ಪೊಲೀಸ್ ಪೇದೆ ಅಸ್ಲಾಂ ಮೇಲೆ ಹಲ್ಲೆ ನಡೆಸಿದ್ದಾರೆ. ಪೊಲೀಸರು ಬೈಕ್‌ನಲ್ಲಿ ಬಂದು ಕಿರಿದಾದ ರಸ್ತೆಯಲ್ಲಿ ಎದುರುಗಡೆಯಿಂದ ಬರುತ್ತಿದ್ದ ಆರೋಪಿಗಳ ಕಾರನ್ನು ಅಡ್ಡಗಟ್ಟಿದ್ದಾರೆ. ನಿರ್ಮಾಣ ಹಂತದಲ್ಲಿರುವ ರಸ್ತೆಯನ್ನು ಒಂದು ಬದಿಯಲ್ಲಿ ಸಂಚಾರಕ್ಕೆ ನಿರ್ಬಂಧಿಸಲಾಗಿತ್ತು.

ಹೀಗಾಗಿ ಮತ್ತೊಂದು ಬದಿಯಲ್ಲಿ ಎರಡೂ ದಿಕ್ಕಿನ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಆದರೆ ಘಟನೆ ವೇಳೆ ಬಂಧಿತರು ಮತ್ತೊಂದು ದಿಕ್ಕಿನಲ್ಲಿ ಚಲಿಸುತ್ತಿದ್ದರು. ಇದನ್ನು ಗಮನಿಸಿದ ಕರ್ತವ್ಯ ನಿರತ ಪೊಲೀಸರು ಅವರ ಚಲಿಸುತ್ತಿದ್ದ ಕಾರನ್ನು ಅಡ್ಡಗಟ್ಟಿದ್ದಾರೆ.

ಅವರ ಕಾರಿಂದ ಇತರರ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ವಾಹನವನ್ನು ಸ್ಥಳಾಂತರಿಸುವಂತೆ ಪೊಲೀಸರು ಮನವಿ ಮಾಡಿದಾಗ ಆರೋಪಿಗಳು ಕಾರಿನಿಂದ ಇಳಿದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಆಕ್ರೋಶದ ಭರದಲ್ಲಿ ಕರ್ತವ್ಯ ನಿರತ ಪೊಲೀಸರ ಮೇಲೆ ಕಪಾಳಮೋಕ್ಷ ಮಾಡಿ ಹಲ್ಲೆ ನಡೆಸಿದ್ದಾರೆ. ಇಬ್ಬರು ಪೊಲೀಸರು ತಕ್ಷಣವೇ ಬ್ಯಾಕ್‌ಅಪ್‌ಗಾಗಿ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದಾರೆ. ಈ ವೇಳೆ ಸ್ಥಳಕ್ಕಾಗಿಸಿದ ಇತರೆ ಪೊಲೀಸ್ ಸಿಬ್ಬಂದಿಗಳು ಅವರನ್ನು ಬಂಧಿಸಿದ್ದಾರೆ. 

ಅಲ್ಲದೆ ಅವರನ್ನು ವಶಕ್ಕೆ ತೆಗೆದುಕೊಂಡು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com