ಹೆಲಿಕಾಪ್ಟರ್ ಪತನ: ಗಾಯಾಳು ಕ್ಯಾಪ್ಟನ್ ವರುಣ್ ಸಿಂಗ್ ಬೆಂಗಳೂರು ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರ
ಬೆಂಗಳೂರು: ಬುಧವಾರ ಭಾರತೀಯ ಸೇನಾ ದಂಡನಾಯಕ ಬಿಪಿನ್ ರಾವತ್ ಅವರನ್ನು ಬಲಿಪಡೆದ ಸೇನಾ ಹೆಲಿಕಾಪ್ಟರ್ ಅವಘಡದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಲ್ಲಿ ಮಾಧ್ಯಮ ಸಿಬ್ಬಂದಿ ಪ್ರವೇಶವನ್ನು ನಿಷೇಧಿಸಲಾಗಿದೆ.
ಹೆಲಿಕಾಪ್ಟರ್ ಅವಘಡದಲ್ಲಿ ಒಟ್ಟು 13 ಮಂದಿ ಸಾವನ್ನಪ್ಪಿದ್ದರು. ಮೂಲಗಳ ಪ್ರಕಾರ ಕ್ಯಾ. ವರುಣ್ ಸಿಂಗ್ ಅವರು ಶೇ.80ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದರೂ, ಸ್ಥಿರವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಅವರನ್ನು ಉಳಿಸಲು ಎಲ್ಲಾ ಬಗೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಬುಧವಾರ ಬೆಳಿಗ್ಗೆ 11.48ರ ಸಮಯದಲ್ಲಿ ಟೇಕಾಫ್ ಆದ ಹೆಲಿಕಾಪ್ಟರ್ 10 ಕಿ.ಮೀ ದೂರದಲ್ಲಿ ಪತನಗೊಂಡಿತ್ತು. ಪತನಕ್ಕೆ ಖಚಿತ ಕಾರಣ ತಿಳಿದುಬಂದಿಲ್ಲ. ನತದೃಷ್ಟ ಹೆಲಿಕಾಪ್ಟರಿನಲ್ಲಿದ್ದ ಬ್ಲ್ಯಾಕ್ ಬಾಕ್ಸನ್ನು ಪತ್ತೆಹಚ್ಚಲಾಗಿದ್ದು ಪರಿಶೀಲನೆ ನಡೆಯುತ್ತಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ