ಬೆಂಗಳೂರಿನಲ್ಲಿ ಕೊರೋನಾದಿಂದ ನಾಲ್ವರು ಸಾವು: ರಾಜ್ಯದಲ್ಲಿ 373 ಹೊಸ ಪ್ರಕರಣ ಪತ್ತೆ, 292 ಸೋಂಕಿತರು ಗುಣಮುಖ
ರಾಜ್ಯದಲ್ಲಿ ಕೋವಿಡ್-19 ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 373 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29, 99,471ಕ್ಕೆ ಏರಿಕೆಯಾಗಿದೆ.
Published: 09th December 2021 07:21 PM | Last Updated: 09th December 2021 07:28 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 373 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29, 99,471ಕ್ಕೆ ಏರಿಕೆಯಾಗಿದೆ.
292 ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 29,53,857ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 7,332 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸೋಂಕಿನಿಂದ ಇಂದು 4 ಮಂದಿ ಮೃತಪಟ್ಟಿದ್ದಾರೆ. ಒಟ್ಟು ಮೃತರ ಸಂಖ್ಯೆ 38,253ಕ್ಕೆ ಏರಿಕೆಯಾಗಿದೆ. ಸೋಂಕಿನ ಶೇಕಡಾವಾರು ಪ್ರಮಾಣ ಶೇ. 0.31 ರಷ್ಟಿದ್ದು, ಮರಣ ಪ್ರಮಾಣ ಶೇ. 1.07 ರಷ್ಟಿದೆ. ಬೆಂಗಳೂರಿನಲ್ಲಿ 211 ಹೊಸ ಪ್ರಕರಣ ಪತ್ತೆಯಾಗಿದ್ದು, 133 ಸೋಂಕಿತರು ಗುಣಮುಖರಾಗಿದ್ದಾರೆ. ನಾಲ್ವರು ಸಾವನ್ನಪ್ಪಿದ್ದಾರೆ.
ಬಳ್ಳಾರಿ, ಬೀದರ್, ಚಿತ್ರದುರ್ಗ, ದಾವಣಗೆರೆ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ರಾಮನಗರ, ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.
ಇಂದಿನ 09/12/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/FPCiSyQIND@CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/oaWsbJJhma
— K'taka Health Dept (@DHFWKA) December 9, 2021