ಹುಟ್ಟುಹಬ್ಬದಂದೇ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಎಸ್.ಆರ್‌. ಮೋರೆ‌ ವಿಧಿವಶ

ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಎಸ್.ಆರ್‌.ಮೋರೆ‌ ಧಾರವಾಡ ಎಸ್‌ಡಿ‌ಎಂ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಎಸ್ .ಆರ್ ಮೋರೆ
ಎಸ್ .ಆರ್ ಮೋರೆ

ಧಾರವಾಡ: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಎಸ್.ಆರ್‌.ಮೋರೆ‌ ಧಾರವಾಡ ಎಸ್‌ಡಿ‌ಎಂ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಮಾಜಿ ಸಚಿವ ಎಸ್.ಆರ್. ಮೋರೆಕಳೆದ ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ನಾಲ್ಕು ಬಾರಿ ಧಾರವಾಡದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದ ಎಸ್.ಆರ್.ಮೋರೆ, ಬಂಗಾರಪ್ಪ ಹಾಗೂ ಧರಂಸಿಂಗ್ ಸರ್ಕಾರದಲ್ಲಿ ಸಚಿವರಾಗಿದ್ದರು.

ಬಂಗಾರಪ್ಪ ಸರ್ಕಾರದಲ್ಲಿ ಸಹಕಾರಿ ಸಚಿವ ಹಾಗೂ ಧರಂಸಿಂಗ್ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.ವಿಧಿಯಾಟವೆಂಬಂತೆ ಜನ್ಮದಿನದಂದೇ ಎಸ್.ಆರ್‌.ಮೋರೆ‌ ನಿಧನ ಹೊಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com