ಬೆಂಗಳೂರು: ಮೌಂಟ್ ಕಾರ್ಮೆಲ್ ಕಾಲೇಜ್ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್, ಸಂಪರ್ಕಕ್ಕೆ ಬಂದ ಇಬ್ಬರಿಗೆ ನೆಗಟಿವ್

ಮೌಂಟ್ ಕಾರ್ಮೆಲ್ ಪ್ರಿ ಯೂನಿವರ್ಸಿಟಿ ಕಾಲೇಜಿನಲ್ಲಿ ಒಬ್ಬ ವಿದ್ಯಾರ್ಥಿನಿಗೆ ಡಿಸೆಂಬರ್ 7 ರಂದು ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ.
ಮೌಂಟ್ ಕಾರ್ಮೆಲ್ ಕಾಲೇಜ್
ಮೌಂಟ್ ಕಾರ್ಮೆಲ್ ಕಾಲೇಜ್

ಬೆಂಗಳೂರು: ಮೌಂಟ್ ಕಾರ್ಮೆಲ್ ಪ್ರಿ ಯೂನಿವರ್ಸಿಟಿ ಕಾಲೇಜಿನಲ್ಲಿ ಒಬ್ಬ ವಿದ್ಯಾರ್ಥಿನಿಗೆ ಡಿಸೆಂಬರ್ 7 ರಂದು ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ.

ವಿದ್ಯಾರ್ಥಿನಿಯ ಬ್ಯಾಚ್‌ನಲ್ಲಿರುವ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ನಡೆಸುವಂತೆ ಎಚ್ಚರಿಕೆ ನೀಡಲಾಯಿತು. ನಂತರ ಆಕೆಯ ಇಬ್ಬರು ಪ್ರಾಥಮಿಕ ಸಂಪರ್ಕಿತರಿಗೆ ಕೊರೋನಾ ನೆಗಟಿವ್ ಬಂದಿದೆ ಎಂದು ಕಾಲೇಜಿನ ಅಧಿಕೃತ ಮೂಲ ಗುರುವಾರ ಸ್ಪಷ್ಟಪಡಿಸಿದೆ.

ಕಾಲೇಜಿನ ವಿದ್ಯಾರ್ಥಿಗಳಿಗೆ ಇಂದಿನಿಂದ ಮಧ್ಯಂತರ ಪರೀಕ್ಷೆಗಳು ಆರಂಭವಾಗಿದ್ದು, ಸಾಮಾನ್ಯ ರೀತಿಯಲ್ಲಿ ಪರೀಕ್ಷೆ ನಡೆಸಲಾಯಿತು. ಬೆಳಗಿನ ಬ್ಯಾಚ್‌ಗೆ ಶೇ. 96 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಮಂಗಳವಾರ ರಾತ್ರಿ ಪಾಸಿಟಿವ್ ಬಂದಿರುವ ವಿದ್ಯಾರ್ಥಿನಿ ತನ್ನ ಹಾಲ್ ಟಿಕೆಟ್ ಪಡೆಯಲು ಅದರ ಹಿಂದಿನ ದಿನ ಕಾಲೇಜಿಗೆ ಭೇಟಿ ನೀಡಿದ್ದರು ಎಂದು ಹೇಳಲಾಗಿದೆ. ಆದರೆ ಮೂಲಗಳ ಪ್ರಕಾರ ಇತರ ವಿದ್ಯಾರ್ಥಿಗಳ ಸಂಪರ್ಕಕ್ಕೆ ಬಂದಿಲ್ಲ.

ಏತನ್ಮಧ್ಯೆ, ಶಿವಾಜಿನಗರ ಪ್ರದೇಶದ ಬಿಬಿಎಂಪಿ ಆರೋಗ್ಯ ಅಧಿಕಾರಿ ಡಾ.ನವೀನ್ ಅವರು ಮೌಂಟ್ ಕಾರ್ಮೆಲ್ ಕ್ಯಾಂಪಸ್‌ನಲ್ಲಿ ಒಂದೇ ಒಂದು ಪ್ರಕರಣ ವರದಿಯಾಗಿಲ್ಲ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com