ಕಲಬುರಗಿ: ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಬಂಧನ, 1.68 ಕೆಜಿ ಚಿನ್ನ ವಶ
ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರ ಎಂಟು ಜನರನ್ನು ಬಂಧಿಸಿದ್ದು, ಅವರ ಬಳಿಯಿದ್ದ 1.68 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
Published: 10th December 2021 11:44 AM | Last Updated: 10th December 2021 11:44 AM | A+A A-

ಎ ಶ್ರೀನಿವಾಸುಲು
ಕಲಬುರಗಿ: ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರ ಎಂಟು ಜನರನ್ನು ಬಂಧಿಸಿದ್ದು, ಅವರ ಬಳಿಯಿದ್ದ 1.68 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಎಎನ್‌ಐ ಜತೆ ಮಾತನಾಡಿದ ಉಪ ಪೊಲೀಸ್ ಆಯುಕ್ತ ಎ ಶ್ರೀನಿವಾಸುಲು, ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಆರೋಪಿಗಳನ್ನು ಬಂಧಿಸಿದ್ದೇವೆ ಮತ್ತು ಅವರಿಂದ 1.68 ಕೆಜಿ ಚಿನ್ನ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನು ಓದಿ: ಬೆಂಗಳೂರು: ಸಾಲ ನೀಡುವ ನೆಪದಲ್ಲಿ 1 ಕೋಟಿ 80 ಲಕ್ಷ ರೂ. ವಂಚಿಸಿದ ಕಂಪನಿ, ಮೂವರ ಬಂಧನ
"ನವೆಂಬರ್ 23 ರಂದು ಕೆಲವು ಅಪರಿಚಿತ ವ್ಯಕ್ತಿಗಳು ಚಿನ್ನದ ವ್ಯಾಪಾರಿಯ ಕೆಲಸಗಾರನ ಬಳಿ ಇದ್ದ ಚಿನ್ನ ದರೋಡೆ ಮಾಡಿದ್ದರು. ಈ ಸಂಬಂಧ ದೂರು ದಾಖಲಾದ ನಂತರ ನಾವು ಅವರನ್ನು ಬಂಧಿಸಿ ಅವರ ಬಳಿಯಿದ್ದ 1.68 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದೇವೆ" ಎಂದು ಅವರು ಹೇಳಿದರು.
ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎ ಶ್ರೀನಿವಾಸುಲು ಅವರು ತಿಳಿಸಿದ್ದಾರೆ.