ರಾಜ್ಯದಲ್ಲಿ ಓಮಿಕ್ರಾನ್‌ನಿಂದ ಗುಣಮುಖರಾಗಿ ಡಿಸ್ಚಾರ್ಜ್‌ ಆದವರಿಗೆ ಹೊಸ ಮಾರ್ಗಸೂಚಿ

ಕರ್ನಾಟಕದಲ್ಲಿ ಕೋವಿಡ್ ವೈರಸ್‌ ಹೊಸ ರೂಪಾಂತರಿ ಓಮಿಕ್ರಾನ್‌ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್‌ ಆದವರಿಗಾಗಿ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹೊರಡಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್ ವೈರಸ್‌ ಹೊಸ ರೂಪಾಂತರಿ ಓಮಿಕ್ರಾನ್‌ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್‌ ಆದವರಿಗಾಗಿ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹೊರಡಿಸಿದೆ. 

ಬೆಂಗಳೂರಿನಲ್ಲಿ ಎರಡು ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿತ್ತು. ಓಮಿಕ್ರಾನ್ ರೋಗಿಗಳಿಗೆ ಚಿಕಿತ್ಸೆ ಪ್ರಕ್ರಿಯೆ, ಡಿಸ್ಚಾರ್ಜ್ ಆದ ನಂತರ ಹೇಗಿರಬೇಕು ಎಂಬುದಕ್ಕೆ ಯಾವುದೇ ಮಾರ್ಗಸೂಚಿ ಹೊರಡಿಸಿಲ್ಲ ಎಂದು ಪ್ರತಿಪಕ್ಷಗಳು ತರಾಟೆಗೆ ತೆಗದುಕೊಂಡ ನಂತರ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.

ಹೊಸ ಮಾರ್ಗಸೂಚಿ
ಓಮಿಕ್ರಾನ್‌ ಸೋಂಕಿಗೆ ಒಳಗಾದ ರೋಗಿಯು ಆರೋಗ್ಯ ಇಲಾಖೆಯ ಮಾನದಂಡಗಳನ್ನು ಪೂರೈಸಿದರೆ, 10 ದಿನಗಳ ನಂತರ ಅವರನ್ನು ಬಿಡುಗಡೆ ಮಾಡಬಹುದು. ಸತತ ಮೂರು ದಿನಗಳು ಯಾವುದೇ ರೋಗಲಕ್ಷಣಗಳಿಲ್ಲದಿದ್ದರೆ, ಸತತ ನಾಲ್ಕು ದಿನಗಳವರೆಗೆ ಆಮ್ಲಜನಕ ಮಟ್ಟ ಶೇ. 95 ಇದ್ದರೆ, 24 ಗಂಟೆ ಅವಧಿಯಲ್ಲಿ 2 ಆರ್‌ಟಿಪಿಸಿಆರ್‌ ಪರೀಕ್ಷೆಯಲ್ಲಿ ನೆಗೆಟಿವ್‌ ವರದಿ ಬಂದಿದ್ದರೆ ಅಂತಹವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಬಹುದು. ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ವ್ಯಕ್ತಿ, ಒಂದು ವಾರದ ಅವಧಿಗೆ ಹೋಂ ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com