Online Desk
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 320 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3000105ಕ್ಕೆ ಏರಿಕೆಯಾಗಿದೆ.
317 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 29,54,513ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 7,306 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: ಲಸಿಕೆ ಪಡೆದ 3-4 ತಿಂಗಳುಗಳಲ್ಲೇ ಒಮಿಕ್ರಾನ್ ಸೋಂಕು ಬಾಧಿಸಬಹುದು: ದಕ್ಷಿಣ ಆಫ್ರಿಕಾದ ಹಿರಿಯ ವೈದ್ಯೆ
ಇಬ್ಬರು ಸೋಂಕಿತರು ಇಂದು ಮೃತಪಟ್ಟಿದ್ದು, ಸೋಂಕಿನಿಂದ ಈವರೆಗೂ ಮೃತಪಟ್ಟವರ ಒಟ್ಟು ಸಂಖ್ಯೆ 38,257ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇ. 0.30 ರಷ್ಟಿದ್ದು, ಮರಣ ಪ್ರಮಾಣ ಶೇ. 0.62 ರಷ್ಟಿದೆ. ಬೆಂಗಳೂರಿನಲ್ಲಿ 190 ಹೊಸ ಪ್ರಕರಣ ಪತ್ತೆಯಾಗಿದ್ದು, 123 ಸೋಂಕಿತರು ಗುಣಮುಖರಾಗಿದ್ದಾರೆ. ಇಬ್ಬರು ಸಾವನ್ನಪ್ಪಿದ್ದಾರೆ.
ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಗದಗ್, ಹಾವೇರಿ, ಕೋಲಾರ, ಕೊಪ್ಪಳ,ರಾಯಚೂರು, ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.