ಬೆಳಗಾವಿ: ಅಧಿವೇಶನಕ್ಕೆ ಆಗಮಿಸಿರುವವರಿಗೆ 2 ಡೋಸ್ ಲಸಿಕೆ, ಆರ್'ಟಿ-ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ!

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಆಗಮಿಸುವವರಿಗೆ ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿರುವುದು ಹಾಗೂ 72 ಗಂಟೆಯೊಳಗಿನ ಆರ್‍'ಟಿ-ಪಿಸಿಆರ್ ನೆಗೆಟಿವ್ ಕಡ್ಡಾಯಗೊಳಿಸಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಆಗಮಿಸುವವರಿಗೆ ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿರುವುದು ಹಾಗೂ 72 ಗಂಟೆಯೊಳಗಿನ ಆರ್‍'ಟಿ-ಪಿಸಿಆರ್ ನೆಗೆಟಿವ್ ಕಡ್ಡಾಯಗೊಳಿಸಲಾಗಿದೆ.

ಜಿಲ್ಲಾಧಿಕಾರಿ ವೆಂಕಟೇಶಕುಮಾರ್ ಅವರು ನಿನ್ನೆಯಷ್ಟೇ ಬೆಳಗಾವಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸುವ ಅತಿಥಿಗಳಿಗೆ ವಸತಿ, ಪ್ರಯಾಣ ಮತ್ತು ಕಚೇರಿ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಸಭೆಯಲ್ಲಿ ಹೋಟೆಲ್ ಉದ್ಯಮಿಗಳೂ ಕೂಡ ಪಾಲ್ಗೊಂಡು ತಮ್ಮ ಹೋಟೆಲ್ ಗಳಲ್ಲಿ ಜಾರಿಯಲ್ಲಿರುವ ಕೋವಿಡ್ ನಿಯಮಗಳ ಕುರಿತು ಅಧಿಕಾರಿಗಳಿಗೆ ವಿವರಿಸಿದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವೆಂಕಟೇಶ್ ಕುಮಾರ್ ಅವರು, ಅಧಿವೇಶನಕ್ಕೆ ಆಗಮಿಸಿರುವ ಅಧಿಕಾರಿಗಳು, ಶಾಸಕರು, ಮಾಧ್ಯಮ ಪ್ರತಿನಿಧಿಗಳು ಸೇರಿದಂತೆ ಪ್ರತಿಯೊಬ್ಬರೂ ಎರಡು ಡೋಸ್ ಲಸಿಕೆ ಪಡೆದಿರುವುದು ಹಾಗೂ ಆರ್'ಟಿ-ಪಿಸಿಆರ್ ವರದಿ ಹೊಂದಿರುವುದು ಕಡಾಡಾಯ ಮಾಡಲಾಗಿದೆ.

ಸಚಿವರು, ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವಾಲಯದ ಅಧಿಕಾರಿಗಳಿಗೆ ಅಗತ್ಯವಿರುವ ವಾಹನಗಳನ್ನು ಒದಗಿಸುವ ಮೂಲಕ ಅಧಿವೇಶನದಲ್ಲಿ ಶಿಷ್ಟಾಚಾರಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ ಮತ್ತು ಅಧಿವೇಶನದಲ್ಲಿ ಒದಗಿಸಲಾದ ಸೌಲಭ್ಯಗಳ ಕುರಿತು ಮಾಹಿತಿ ನೀಡಲು ಸಚಿವರು, ಉನ್ನತ ಅಧಿಕಾರಿಗಳು ಮತ್ತು ಅವರ ಪಿಆರ್‌ಒಗಳನ್ನು ಒಳಗೊಂಡ ಪ್ರತ್ಯೇಕ ವಾಟ್ಸಾಪ್ ಗುಂಪುಗಳನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com