ತೆರಿಗೆ ವಿವಾದ: ಮಂತ್ರಿ ಮಾಲ್ ತೆರೆಯಲು ಹೈಕೋರ್ಟ್ ಅನುಮತಿ

ತೆರಿಗೆ ಪಾವತಿ ಮಾಡುವಲ್ಲಿ ವಿಫಲವಾಗಿದ್ದ ನಗರದ ಪ್ರಮುಖ ಶಾಪಿಂಗ್ ಮಾಲ್ ಮಂತ್ರಿ ಮಾಲ್ ತೆರೆಯಲು ಅಭಿಷೇಕ್ ಪ್ರಾಪ್‌ಬಿಲ್ಡ್ ಪ್ರೈವೇಟ್ ಲಿಮಿಟೆಡ್‌ಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಅನುಮತಿ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ತೆರಿಗೆ ಪಾವತಿ ಮಾಡುವಲ್ಲಿ ವಿಫಲವಾಗಿದ್ದ ನಗರದ ಪ್ರಮುಖ ಶಾಪಿಂಗ್ ಮಾಲ್ ಮಂತ್ರಿ ಮಾಲ್ ತೆರೆಯಲು ಅಭಿಷೇಕ್ ಪ್ರಾಪ್‌ಬಿಲ್ಡ್ ಪ್ರೈವೇಟ್ ಲಿಮಿಟೆಡ್‌ಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಅನುಮತಿ ನೀಡಿದೆ.

 ತೆರಿಗೆ ಬಾಕಿಯ ಸ್ವಲ್ಪ ಭಾಗವನ್ನು ತಕ್ಷಣ ಪಾವತಿಸಲು ಹೈಕೋರ್ಟ್​ನ ಏಕಸದಸ್ಯ ಪೀಠ ಅರ್ಜಿದಾರ ಹಮಾರಾ ಷೆಲ್ಟರ್ಸ್, ಅಭಿಷೇಕ್ ಪ್ರಾಪರ್ಟೀಸ್​ಗೆ ಸೂಚನೆ ನೀಡಿದೆ. ಕೂಡಲೇ ರೂ. 4 ಕೋಟಿ ಮೊತ್ತದ ಚೆಕ್ ನೀಡುವಂತೆ ಡಿ.13ರ ಮಧ್ಯಾಹ್ನದೊಳಗೆ ರೂ.2 ಕೋಟಿ ಡಿಡಿ ಪಾವತಿ ಮಾಡುವಂತೆ ಸೂಚನೆ ನೀಡಿದೆ.

ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ ಬಿಬಿಎಂಪಿಗೆ ಸುಮಾರು 27 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಡಿ. 6ರಂದು ಮತ್ತೊಮ್ಮೆ ಮಂತ್ರಿ ಮಾಲ್​ಗೆ ಬೀಗ ಹಾಕಲಾಗಿತ್ತು. 3 ವರ್ಷದಿಂದ ಮಂತ್ರಿ ಮಾಲ್ ಬಿಬಿಎಂಪಿಗೆ ಒಟ್ಟು 27 ಕೋಟಿ ತೆರಿಗೆಯನ್ನು ಪಾವತಿಸಿಲ್ಲ. ಪದೇಪದೆ ನೋಟಿಸ್ ಜಾರಿ ಮಾಡಿದರೂ ತೆರಿಗೆ ಪಾವತಿಸಿಲ್ಲ ಎಂಬ ಕಾರಣಕ್ಕೆ ಬಿಬಿಎಂಪಿ ಅಧಿಕಾರಿಗಳು ಮಂತ್ರಿ ಮಾಲ್​ಗೆ ಬೀಗ ಜಡಿದಿದ್ದರು.

ಈ ಹಿಂದೆ 15 ದಿನಗಳೊಳಗೆ ತೆರಿಗೆ ಪಾವತಿಸುವಂತೆ ಮಾಲ್​ಗೆ ಗಡುವು ನೀಡಲಾಗಿತ್ತು. 15 ದಿನದೊಳಗೆ ತೆರಿಗೆ ಪಾವತಿಸುವುದಾಗಿ ಮಾಲೀಕರು ಮನವಿ ಮಾಡಿದ್ದರು. ಬಿಬಿಎಂಪಿ ಆಯುಕ್ತರ ಬಳಿ ಮಂತ್ರಿಮಾಲ್ ಮಾಲೀಕ ಮನವಿ ಮಾಡಿಕೊಂಡಿದ್ದರು. ಹೀಗಾಗಿ ಬಿಬಿಎಂಪಿ 15 ದಿನಗಳ ಕಾಲಾವಕಾಶ ನೀಡಿತ್ತು. ನವೆಂಬರ್ ತಿಂಗಳ ಅಂತ್ಯದೊಳಗೆ ತೆರಿಗೆ ಪಾವತಿಸುವಂತೆ ಸೂಚನೆ ನೀಡಲಾಗಿತ್ತು. ಆದರೆ ಇನ್ನು ಉಳಿದ ಬಾಕಿ ತೆರಿಗೆ ಹಣ ನೀಡದ ಕಾರಣ ಡಿ. 6ರಂದು ಮತ್ತೆ ಬೀಗ ಹಾಕಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com