ಮುಖ್ಯಮಂತ್ರಿ ರೈತ ವಿದ್ಯಾನಿಧಿ  ವಿದ್ಯಾರ್ಥಿವೇತನ ಯೋಜನೆಗೆ ಸರ್ಕಾರದ ತಿದ್ದುಪಡಿ

ರೈತರ ಮಕ್ಕಳಿಗೆ ಶಿಕ್ಷಣ ವಿದ್ಯಾರ್ಥಿವೇತನ ನೀಡುವ ನಿಯಮಗಳಿಗೆ ರಾಜ್ಯ ಸರ್ಕಾರ ತಿದ್ದುಪಡಿ ತಂದಿದೆ.   ವಿದ್ಯಾರ್ಥಿಗಳು ಬೇರೆ  ವಿದ್ಯಾರ್ಥಿ ವೇತನ ಪಡೆಯುತ್ತಿದ್ದರೂ ಸಹ ‘ಮುಖ್ಯಮಂತ್ರಿ ರೈತ ವಿದ್ಯಾ ನಿಧಿ ವಿದ್ಯಾರ್ಥಿವೇತನ’ ಪಡೆಯಬಹುದಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರೈತರ ಮಕ್ಕಳಿಗೆ ಶಿಕ್ಷಣ ವಿದ್ಯಾರ್ಥಿವೇತನ ನೀಡುವ ನಿಯಮಗಳಿಗೆ ರಾಜ್ಯ ಸರ್ಕಾರ ತಿದ್ದುಪಡಿ ತಂದಿದೆ.   ವಿದ್ಯಾರ್ಥಿಗಳು ಬೇರೆ  ವಿದ್ಯಾರ್ಥಿ ವೇತನ ಪಡೆಯುತ್ತಿದ್ದರೂ ಸಹ ‘ಮುಖ್ಯಮಂತ್ರಿ ರೈತ ವಿದ್ಯಾ ನಿಧಿ ವಿದ್ಯಾರ್ಥಿವೇತನ’ ಪಡೆಯಬಹುದಾಗಿದೆ.

ಶುಕ್ರವಾರ ಹೊರಡಿಸಿರುವ ಆದೇಶದಂತೆ ವಿವಿಧ ಇಲಾಖೆಗಳಲ್ಲಿ ಲಭ್ಯವಿರುವ ಮಾಹಿತಿ ಆಧರಿಸಿ ಮುಖ್ಯಮಂತ್ರಿ ರೈತ ವಿದ್ಯಾ ನಿಧಿ ವಿದ್ಯಾರ್ಥಿ ವೇತನಕ್ಕೆ ಅರ್ಹ ವಿದ್ಯಾರ್ಥಿಗಳನ್ನು ಗುರುತಿಸಿ ಉನ್ನತ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡಲಿದೆ.  

ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಗಳನ್ನು ಸ್ಕಾಲರ್‌ಶಿಪ್‌ಗಾಗಿ ಪರಿಗಣಿಸಲಾಗುತ್ತದೆ, ಇದರಲ್ಲಿ ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ.

ಇ-ಆಡಳಿತ ಇಲಾಖೆಯ 'ಕುಟುಂಬ' ಅಪ್ಲಿಕೇಶನ್‌ನಲ್ಲಿ ನೋಂದಾಯಿಸಿಸಬೇಕಾಗಿದೆ. ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕೂಡಲೇ ರೈತರ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ಸಹಾಯ ಮಾಡಲು ಮುಖ್ಯಮಂತ್ರಿ ರೈತ ವಿದ್ಯಾ ನಿಧಿ ವಿದ್ಯಾರ್ಥಿವೇತನವನ್ನು ಘೋಷಿಸಿದರು. ಈ ಯೋಜನೆಗೆ 1000 ಕೋಟಿ ಮೀಸಲಿಡುವುದಾಗಿ ಘೋಷಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com