ಬೆಳಗಾವಿ: ಫಾದರ್ ಫ್ರಾನ್ಸಿಸ್ ಮೇಲೆ ಅಪರಿಚಿತ ವ್ಯಕ್ತಿಯಿಂದ ಭೀಕರ ಹಲ್ಲೆ, ಪಾದ್ರಿ ಪ್ರಾಣಾಪಾಯದಿಂದ ಪಾರು

ಬೆಳಗಾವಿಯ ಬಾಕ್ಸೈಟ್ ರಸ್ತೆಯಲ್ಲಿರುವ ಸೇಂಟ್ ಜೋಸೆಫ್ ವರ್ಕರ್ ಚರ್ಚ್‌ನ ಪ್ಯಾರಿಷ್ ಪಾದ್ರಿ ಫಾದರ್ ಫ್ರಾನ್ಸಿಸ್ ಡಿಸೋಜಾ ಅವರ ಮೇಲೆ ಶನಿವಾರ ಮಧ್ಯಾಹ್ನ ಅಪರಿಚಿತ ವ್ಯಕ್ತಿಯೋರ್ವ ಕತ್ತಿಯಿಂದ ಹಲ್ಲೆ ಮಾಡಿದ್ದು, ಪಾದ್ರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಳಗಾವಿ: ಬೆಳಗಾವಿಯ ಬಾಕ್ಸೈಟ್ ರಸ್ತೆಯಲ್ಲಿರುವ ಸೇಂಟ್ ಜೋಸೆಫ್ ವರ್ಕರ್ ಚರ್ಚ್‌ನ ಪ್ಯಾರಿಷ್ ಪಾದ್ರಿ ಫಾದರ್ ಫ್ರಾನ್ಸಿಸ್ ಡಿಸೋಜಾ ಅವರ ಮೇಲೆ ಶನಿವಾರ ಮಧ್ಯಾಹ್ನ ಅಪರಿಚಿತ ವ್ಯಕ್ತಿಯೋರ್ವ ಕತ್ತಿಯಿಂದ ಹಲ್ಲೆ ಮಾಡಿದ್ದು, ಪಾದ್ರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಹಲ್ಲೆಗೊಳಗಾದ ಫ್ರಾನ್ಸಿಸ್, ಕತ್ತಿಯನ್ನು ಹಿಡಿದ ವ್ಯಕ್ತಿಯೊಬ್ಬ ಚರ್ಚ್‌ನ ತಡೆಗೋಡೆಯಿಂದ ಜಿಗಿದು ಮಧ್ಯಾಹ್ನ 3:15 ರ ಸುಮಾರಿಗೆ ಮೊದಲ ಮಹಡಿಗೆ ಪ್ರವೇಶಿಸಿದನು. ಅವರ ಕೋಣೆಯಲ್ಲಿ ಅಡಗಿಕೊಂಡು ಫ್ರಾನ್ಸಿಸ್ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸಿದ. ಅದೃಷ್ಟವಶಾತ್ ದಾಳಿಯಿಂದ ಅವರು ಪಾರಾಗಿದ್ದಾರೆ. ನಂತರ ದಾಳಿಕೋರ ಗೋಡೆ ಹಾರಿ ಪರಾರಿಯಾಗಿದ್ದಾನೆ ಎಂದು ಹೇಳಿದ್ದಾರೆ.

ಇದೀಗ ಈ ಕುರಿತು ಎಪಿಎಂಸಿ ಪೊಲೀಸ್ ಠಾಣೆಗೆ ಕರೆ ಮಾಡಿದ್ದು, ಪೊಲೀಸ್ ತಂಡ ಚರ್ಚ್ ಗೆ ಆಗಮಿಸಿ ಪರಿಶೀಲನೆ ನಡೆಸಿದೆ. 

ಮೂಲಗಳ ಪ್ರಕಾರ, ದಾಳಿಕೋರನ ಚರ್ಚ್ ಆವರಣಕ್ಕೆ ಪ್ರವೇಶಿಸಿದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ ಮತ್ತು ಪೊಲೀಸರು ಶೀಘ್ರದಲ್ಲೇ ಆರೋಪಿಯನ್ನು ಪತ್ತೆಹಚ್ಚುವ ನಿರೀಕ್ಷೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com