ಕರ್ನಾಟಕದಲ್ಲಿ ಓಮಿಕ್ರಾನ್ ಮೂರನೇ ಪ್ರಕರಣ ಪತ್ತೆ: ದಕ್ಷಿಣ ಆಫ್ರಿಕಾದಿಂದ ಬಂದ ವ್ಯಕ್ತಿಯಲ್ಲಿ ಪಾಸಿಟಿವ್
ಕರ್ನಾಟಕದಲ್ಲಿ ಓಮಿಕ್ರಾನ್ ಮೂರನೇ ಪ್ರಕರಣ ಭಾನುವಾರ ಪತ್ತೆಯಾಗಿದೆ. ಖುದ್ದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರೇ ಅದನ್ನು ದೃಢಪಡಿಸಿದ್ದಾರೆ.
Published: 12th December 2021 01:45 PM | Last Updated: 12th December 2021 01:45 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಕರ್ನಾಟಕದಲ್ಲಿ ಓಮಿಕ್ರಾನ್ ಮೂರನೇ ಪ್ರಕರಣ ಭಾನುವಾರ ಪತ್ತೆಯಾಗಿದೆ. ಖುದ್ದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರೇ ಅದನ್ನು ದೃಢಪಡಿಸಿದ್ದಾರೆ.
ದಕ್ಷಿಣ ಆಫ್ರಿಕಾದಿಂದ ಬಂದ ವ್ಯಕ್ತಿಯಲ್ಲಿ ಓಮಿಕ್ರಾನ್ ಪತ್ತೆಯಾಗಿದ್ದು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವ್ಯಕ್ತಿಯ ಪ್ರಾಥಮಿಕ ಸಂಪರ್ಕಕ್ಕೆ 5 ಮಂದಿ ಹಾಗೂ ದ್ವಿತೀಯ ಮಟ್ಟದಲ್ಲಿ 15 ಮಂದಿ ಸಂಪರ್ಕಕ್ಕೆ ಬಂದಿದ್ದಾರೆ.
ದಕ್ಷಿಣ ಆಫ್ರಿಕಾದಿಂದ ಬಂದ 34 ವರ್ಷದ ವ್ಯಕ್ತಿಯಲ್ಲಿ ಓಮಿಕ್ರಾನ್ ಕಾಣಿಸಿಕೊಂಡಿದ್ದು ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ವರದಿಗಾಗಿ ಕಾಯಲಾಗಿದೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.
Third case of #Omicron has been detected in Karnataka. A 34-year-old male returning from South Africa has tested positive. He is isolated and being treated in a govt hospital. 5 primary and 15 secondary contacts have been traced and samples sent for testing. @BSBommai #COVID19
— Dr Sudhakar K (@mla_sudhakar) December 12, 2021