ರಾಜ್ಯದಲ್ಲಿ ಇಂದು ಒಂದೇ ದಿನ ಐವರಲ್ಲಿ ಓಮಿಕ್ರಾನ್ ಸೋಂಕು ಪತ್ತೆ; ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆ!

ರಾಜ್ಯದಲ್ಲಿ ಇಂದು ಒಂದೇ ದಿನ ಐವರಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 8ಕ್ಕೇರಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ ಐವರಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 8ಕ್ಕೇರಿದೆ. 

ರಾಜ್ಯದಲ್ಲಿ ಐವರಲ್ಲಿ ಓಮಿಕ್ರಾನ್ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ. 

ಬ್ರಿಟನ್ ನಿಂದ ಆಗಮಿಸಿರುವ 19 ಯುವಕ, ನೈಜಿರಿಯಾದಿಂದ ಬಂದಿರುವ 52 ವರ್ಷದ ವ್ಯಕ್ತಿ. ದಕ್ಷಿಣ ಆಫ್ರಿಕಾ ಆಫ್ರಿಕಾದಿಂದ ಬಂದಿರುವ 33 ವರ್ಷದ ಯುವಕ ಹಾಗೂ ದೆಹಲಿಯಿಂದ ಆಗಮಿಸಿರುವ 36 ವರ್ಷದ ವ್ಯಕ್ತಿ ಮತ್ತು 70 ವರ್ಷದ ವೃದ್ಧೆ ಸೋಂಕಿಗೆ ತುತ್ತಾಗಿದ್ದಾರೆ. 

ಬೆಂಗಳೂರಿನಲ್ಲಿ ಈ ಹಿಂದೆ ಮೂವರಿಗೆ ಓಮಿಕ್ರಾನ್ ಸೋಂಕು ವಕ್ಕರಿಸಿತ್ತು. ಇನ್ನು ಇಂದು ಒಂದೇ ದಿನ ಐವರಲ್ಲಿ ಓಮಿಕ್ರಾನ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com