ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ದುರ್ಮರಣ
ದಾವಣಗೆರೆ ಜಿಲ್ಲೆಯ ನ್ಯಾಮತಿ ಬಳಿ ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ನಾಲ್ವರು ದುರ್ಮರಣ ಹೊಂದಿದ್ದಾರೆ.
Published: 17th December 2021 03:27 PM | Last Updated: 17th December 2021 03:55 PM | A+A A-

ಅಪಘಾತ ದೃಶ್ಯ
ದಾವಣಗೆರೆ: ದಾವಣಗೆರೆ ಜಿಲ್ಲೆಯ ನ್ಯಾಮತಿ ಬಳಿ ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ನಾಲ್ವರು ದುರ್ಮರಣ ಹೊಂದಿದ್ದಾರೆ.
ಸವಳಂಗ ಬಳಿ ಮಧ್ಯಾಹ್ನ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ.
ಮೃತರನ್ನು ಭದ್ರವತಿಯ ಎಡೇಹಳ್ಳಿ ಗ್ರಾಮದ ಸುನೀಲ್ ದ್ರಾಕ್ಷಾಣಿ, ಸುಮ ಮತ್ತು ಶಾರದಮ್ಮ ಎಂದು ಗುರುತಿಸಲಾಗಿದೆ. ಇನ್ನು ಗಾಯಗೊಂಡಿರುವ ಇಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಸ್ಥಳಕ್ಕೆ ಹೊನ್ನಾಳಿ ಸಿಪಿಐ ದೇವರಾಜ್ ಹಾಗೂ ನ್ಯಾಮತಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೃತರು ಯಡೇಹಳ್ಳಿಯಿಂದ ನ್ಯಾಮತಿ ತಾಲೂಕಿನ ಹಳೇಜೋಗ ಗ್ರಾಮಕ್ಕೆ ಕಾರ್ಯಕ್ರಮವೊಂದಕ್ಕೆ ಕಾರಿನಲ್ಲಿ ಆಗಮಿಸುತ್ತಿದ್ದರು.