ರಾಜ್ಯದಲ್ಲಿ ಇಂದು ಕೊರೋನಾದಿಂದ 5 ಸಾವು: ಬೆಂಗಳೂರಿನಲ್ಲಿ 225 ಸೇರಿ 335 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 335 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,02,127ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 335 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,02,127ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಐವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38,287ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 225 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,59,963ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 286 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,56,691ಕ್ಕೆ ಏರಿಕೆಯಾಗಿದೆ. ಇನ್ನು 7,120 ಸಕ್ರಿಯ ಪ್ರಕರಣಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com