ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 7 ಮಂದಿಗೆ ಕೊರೋನಾ ಪಾಸಿಟಿವ್!
ರಾಜ್ಯದಲ್ಲಿ ಐವರು ಪ್ರಯಾಣಿಕರಿಗೆ ಓಮಿಕ್ರಾನ್ ರೂಪಾಂತರಿ ವೈರಸ್ ಸೋಂಕು ದೃಢಪಟ್ಟ ಒಂದು ದಿನದ ಅಂತರದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಏಳು ಮಂದಿ ಪ್ರಯಾಣಿಕರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.
Published: 18th December 2021 01:34 PM | Last Updated: 18th December 2021 01:39 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಐವರು ಪ್ರಯಾಣಿಕರಿಗೆ ಓಮಿಕ್ರಾನ್ ರೂಪಾಂತರಿ ವೈರಸ್ ಸೋಂಕು ದೃಢಪಟ್ಟ ಒಂದು ದಿನದ ಅಂತರದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಏಳು ಮಂದಿ ಪ್ರಯಾಣಿಕರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.
ಆರೋಗ್ಯ ಇಲಾಖೆಯ ಅಧಿಕಾರಿಗಳ ಪ್ರಕಾರ, ಓಮಿಕ್ರಾನ್ ಸೋಂಕು ಹೆಚ್ಚಿರುವ ಹೈರಿಸ್ಕ್ ದೇಶಗಳಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿ ಪರೀಕ್ಷೆಗೊಳಪಡಿಸಲಾಗುತ್ತದೆ. ಗುರುವಾರ ತಡರಾತ್ರಿ ಲಂಡನ್ ನಿಂದ ಬಂದ ಮತ್ತು ಶುಕ್ರವಾರ ಬಳಿಗ್ಗೆ ದುಬೈನಿಂದ ಬಂದ ಪ್ರಯಾಣಿಕರನ್ನು ತಪಾಸಣೆಗೊಳಪಡಿಸಲಾಗಿತ್ತು.
ಈ ಪ್ರಯಾಣಿಕರ ಪೈಕಿ ಲಂಡನ್ ನಿಂದ ಬಂದ 6 ಮಂದಿ ಹಾಗೂ ದುಬೈನಿಂದ ಬಂದಿದ್ದ ಓರ್ವನಲ್ಲಿ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.
7 ಮಂದಿಯಲ್ಲೂ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. ಇದೀಗ ಸೋಂಕಿತರ ದ್ರವ ಮಾದರಿಗಳನ್ನು ವಂಶವಾಹಿ ಪರೀಕ್ಷೆಗೆ ಕಳುಹಿಸಿ, ಕೂಡಲೇ ಅವರನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಐಸೊಲೇಷನ್ ನಲ್ಲಿ ಇರಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.