ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ವಸತಿ ಗೃಹಗಳ ನಿರ್ಮಿಸಿ: ಸರ್ಕಾರಕ್ಕೆ ಹೊರಟ್ಟಿ

ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ವಸತಿ ಗೃಹಗಳ ನಿರ್ಮಾಣ ಮಾಡುವಂತೆ ರಾಜ್ಯ ಸರ್ಕಾರಕ್ಕೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಸಲಹೆ ನೀಡಿದ್ದಾರೆ.
ಬಸವರಾಜ ಹೊರಟ್ಟಿ
ಬಸವರಾಜ ಹೊರಟ್ಟಿ

ಬೆಳಗಾವಿ: ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ವಸತಿ ಗೃಹಗಳ ನಿರ್ಮಾಣ ಮಾಡುವಂತೆ ರಾಜ್ಯ ಸರ್ಕಾರಕ್ಕೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಸಲಹೆ ನೀಡಿದ್ದಾರೆ.

2016ರಲ್ಲಿ ಸರ್ಕಾರ ಹೊರಡಿಸಿದ ಆದೇಶದಂತ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ತಮ್ಮ ಕಾರ್ಯಕ್ಷೇತ್ರಗಳಲ್ಲಿಯೇ ಉಳಿದುಕೊಳ್ಳುವಂತೆ ಸೂಚಿಸಲಾಗಿದೆ. ಆದರೆ, ಅದನ್ನು ಯಾರೊಬ್ಬರೂ ಅನುಸರಿಸುತ್ತಿಲ್ಲ.  ಸರ್ಕಾರವು ಕೆಲವು ಪಿಡಿಒಗಳಿಗೆ ಬಹು ಜಿಲ್ಲಾ ಪಂಚಾಯತ್ ಗಳ ಪ್ರಭಾರವನ್ನು ನೀಡುವುದರಿಂದ, ಅಧಿಕಾರಿಗಳು ಅವರ ಕಚೇರಿಯಲ್ಲಿ ಅಥವಾ ಕೆಲಸದ ಸ್ಥಳದಲ್ಲಿ ಉಳಿದುಕೊಳ್ಳುತ್ತಿಲ್ಲ. ಕೆಲ ಪಿಡಿಒಗಳು ನಗರದಲ್ಲಿ ಉಳಿದುಕೊಲಳ್ಳುತ್ತಿದ್ದಾರೆ. ಇದರ ಪರಿಣಾಮ ಜನರು ಒಂದೆಡೆಯಿಂದ ಮತ್ತೊಂದೆಡೆ ಓಡಾಡುವಂತಹ ಪರಿಸ್ಥಿತಿ ಎದುರಾಗಿದೆ ಎಂದು ಎಂಎಲ್ಸಿ ಡಾ.ಸಾಬಣ್ಣ ತಳವಾರ ಅವರು ಸದನದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದರು.

ಈ ವೇಳೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು, ನನ್ನ ಬಳಿ ಈ ರೀತಿಯ ಯಾವುದೇ ದೂರುಗಳು ಬಂದಿಲ್ಲ. ಪ್ರತಿ ಗ್ರಾಮ ಪಂಚಾಯಿತಿಗೆ ಸಿಬ್ಬಂದಿ ವಸತಿ ಗೃಹ ನಿರ್ಮಿಸುವ ಕುರಿತು ಮುಖ್ಯಮಂತ್ರಿ ಹಾಗೂ ಹಣಕಾಸು ಇಲಾಖೆ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ. ಪಿಡಿಒಗಳು ಜಿಲ್ಲಾ ಪಂಚಾಯತ್ ಮಿತಿಯೊಳಗೆ ಇರಲು ಮತ್ತು ಜನರ ಕುಂದುಕೊರತೆಗಳನ್ನು ಪರಿಹರಿಸಲು ಸಿಬ್ಬಂದಿಗೆ ಈ ವಸತಿಗೃಹಗಳು ಸಹಾಯ ಮಾಡುತ್ತದೆ ಎಂದು ಹೇಳಿದರು.

ಬಳಿಕ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಯಾವಾಗ ಭರ್ತಿ ಮಾಡಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿ, “ಕಲ್ಯಾಣ ಕರ್ನಾಟಕದ ಹಲವು ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಲೆಕ್ಕಿಗರು ಸೇರಿದಂತೆ ಇತರೆ ಸಿಬ್ಬಂದಿ ಕೊರತೆಯೂ ಇದೆ. ಜಿಲ್ಲಾ ಪಂಚಾಯತ್ ಹುದ್ದೆಗಳಿಗೆ ನೇರವಾಗಿ ಜನರನ್ನು ನೇಮಿಸಲು ಜಿಲ್ಲಾ ಪಂಚಾಯಿತಿ ಸಿಇಒ ಮತ್ತು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಿದ್ದೇವೆ. ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮಕೈಗೊಳ್ಳುತ್ತೇವೆಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com