ಎಂಇಎಸ್ ಪುಂಡರಿಂದ ಪೊಲೀಸ್ ವಾಹನಗಳಿಗೆ ಬೆಂಕಿ ಅಕ್ಷಮ್ಯ, ದುರುಳರಿಗೆ ಕನ್ನಡಿಗರ ಶಕ್ತಿ ತೋರಿಸಬೇಕು: ಎಚ್ ಡಿಕೆ

ಬೆಳಗಾವಿಯಲ್ಲಿ ಕಳೆದ ರಾತ್ರಿ ಪುಂಡರು ಪೊಲೀಸ್ ವಾಹನಗಳಿಗೆ ಹಾನಿ ಮಾಡಿ ಬೆಂಕಿ ಹಚ್ಚಿರುವುದು ಅಕ್ಷಮ್ಯವಾಗಿದೆ. ಕನ್ನಡಿಗರ ಹೆಮ್ಮೆ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಹಾಳು ಮಾಡಿರುವುದು ಕ್ಷಮಾರ್ಹವಲ್ಲದ ಅಪರಾಧ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಖಂಡಿಸಿದ್ದಾರೆ.
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಬೆಳಗಾವಿಯಲ್ಲಿ ಕಳೆದ ರಾತ್ರಿ ಪುಂಡರು ಪೊಲೀಸ್ ವಾಹನಗಳಿಗೆ ಹಾನಿ ಮಾಡಿ ಬೆಂಕಿ ಹಚ್ಚಿರುವುದು ಅಕ್ಷಮ್ಯವಾಗಿದೆ. ಕನ್ನಡಿಗರ ಹೆಮ್ಮೆ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಹಾಳು ಮಾಡಿರುವುದು ಕ್ಷಮಾರ್ಹವಲ್ಲದ ಅಪರಾಧ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಖಂಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಸರ್ಕಾರಿ ಕಾರುಗಳನ್ನು ಗುರಿ ಮಾಡಿರುವುದು ರಾಜ್ಯ ಸರ್ಕಾರವನ್ನೇ ಗುರಿ ಮಾಡಿದಂತೆ. ಸಂಗೊಳ್ಳಿ ರಾಯಣ್ಣ ಪ್ರತಿಮೆ ಮೇಲೆ ದಾಳಿ ಮಾಡಿರುವುದು ಕನ್ನಡಿಗರು, ಕರ್ನಾಟಕದ ಮೇಲಿನ ದಾಳಿಗೆ ಸಮ. ಸರ್ಕಾರ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು, ಕೂಡಲೇ ಆ ದುರುಳರಿಗೆ ಕನ್ನಡಿಗರ ಶಕ್ತಿ ಏನೆಂದನ್ನು ತೋರಿಸಬೇಕು ಎಂದಿದ್ದಾರೆ.

ಬೆಳಗಾವಿಯಲ್ಲಿ ಭಯೋತ್ಪಾದನೆ ಸೃಷ್ಟಿಸುತ್ತಿರುವ ಈ ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರುವುದಿಲ್ಲ, ತಕ್ಕಪಾಠ ಕಲಿಸುವ ಕಾಲ ಸನ್ನಿಹಿತವಾಗಿದೆ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com