ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 168 ಸೇರಿ 300 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 300 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,02,427ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 300 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,02,427ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಒಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38,288ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 168 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,60,131ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ ಯಾರು ಮೃತಪಟ್ಟಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 279 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,56,970ಕ್ಕೆ ಏರಿಕೆಯಾಗಿದೆ. ಇನ್ನು 7,140 ಸಕ್ರಿಯ ಪ್ರಕರಣಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com