ಬೆಳಗಾವಿ ಅಧಿವೇಶನದಲ್ಲೇ ಮತಾಂತರ ನಿಷೇಧ ಮಸೂದೆ ಮಂಡನೆಗೆ ಸಚಿವ ಸಂಪುಟ ಅಸ್ತು

ಪ್ರಸ್ತುತ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲೇ ಮತಾಂತರ ನಿಷೇಧ ಕಾಯ್ದೆ ಮಂಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಸೋಮವಾರ ನಡೆದ ಸಚಿವ ಸಂಪುಟ ಸಭೆ ಮತಾಂತರ ನಿಷೇಧ ಮಸೂದೆ...
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ: ಪ್ರಸ್ತುತ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲೇ ಮತಾಂತರ ನಿಷೇಧ ಕಾಯ್ದೆ ಮಂಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಸೋಮವಾರ ನಡೆದ ಸಚಿವ ಸಂಪುಟ ಸಭೆ ಮತಾಂತರ ನಿಷೇಧ ಮಸೂದೆ ಮಂಡನೆಗೆ ಒಪ್ಪಿಗೆ ನೀಡಿದೆ.

ಇಂದು ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ  ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖವಾಗಿ ಮತಾಂತರ ನಿಷೇಧ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಲು ಒಪ್ಪಿಗೆ ನೀಡಲಾಗಿದೆ.

ಮತಾಂತರ ನಿಷೇಧ ವಿಧೇಯಕಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಅದನ್ನು ನಾಳೆ ವಿಧಾನಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದೆ.

ಈ ವಿಧೇಯಕ ಮಂಡನೆಗೆ ಪ್ರತಿ ಪಕ್ಷ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ ಬಿಜೆಪಿ ಮಾತ್ರ ಶತಾಯ ಗತಾಯ ಈ ವಿಧೇಯಕ ಮಂಡನೆಗೆ ಮುಂದಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com