ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧಿಸುವ ಬಗ್ಗೆ ಚಿಂತನೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಳಗಾವಿಯಲ್ಲಿ ಜನರೇ ಎಂಇಎಸ್ ಸಂಘಟನೆಯನ್ನು ಬ್ಯಾನ್ ಮಾಡಿದ್ದಾರೆ. ರಾಜ್ಯದಲ್ಲಿ ಅದನ್ನು ಅಧಿಕೃತವಾಗಿ ನಿಷೇಧಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಚಿಂತನೆ ಮಾಡುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು...
ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ

ಬೆಳಗಾವಿ: ಬೆಳಗಾವಿಯಲ್ಲಿ ಜನರೇ ಎಂಇಎಸ್ ಸಂಘಟನೆಯನ್ನು ಬ್ಯಾನ್ ಮಾಡಿದ್ದಾರೆ. ರಾಜ್ಯದಲ್ಲಿ ಅದನ್ನು ಅಧಿಕೃತವಾಗಿ ನಿಷೇಧಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಚಿಂತನೆ ಮಾಡುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸೋಮವಾರ ಹೇಳಿದ್ದಾರೆ.

ಇಂದು ಎಂಇಎಸ್ ನಿಷೇಧಿಸುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬೆಳಗಾವಿಯಲ್ಲಿ ಯಾವುದೇ ರೀತಿಯ ಗಲಾಟೆ ಇಲ್ಲ. ಕನ್ನಡಿಗರು ಹಾಗೂ ಮರಾಠಿಗರು ಇಲ್ಲಿ ಸೌಹಾರ್ದಯುತವಾಗಿ ಜೀವನ ಸಾಗಿಸುತ್ತಿದ್ದಾರೆ. ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ ಎಂದರು.

ಪ್ರಜಾಪ್ರಭುತ್ವದ ತಳಹದಿಯಲ್ಲಿ ಕನ್ನಡ ಪರ ಸಂಘಟನೆಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸಲಿ. ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ಜನರೇ ಬ್ಯಾನ್ ಮಾಡಿದ್ದಾರೆ. ಸರ್ಕಾರದ ಮಟ್ಟದಲ್ಲಿ ಎಂಇಎಸ್ ಸಂಘಟನೆಯ ಮೇಲೆ ನಿಷೇಧ ಹೇರುವ ಬಗ್ಗೆ ಚಿಂತನೆ ಮಾಡುತ್ತೇವೆ. ನಾಡದ್ರೋಹಿ ಸಂಘಟನೆಯನ್ನು ನಿಷೇಧಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಲಿದ್ದಾರೆ ಎಂದು ಆರಗ ಜ್ಞಾನೇಂದ್ರ ತಿಳಿಸಿದರು.

ರಾಜ್ಯದಲ್ಲಿ ಆಗಿರುವ ಗಲಾಟೆಗೆ ಸಂಬಂಧಿಸಿದಂತೆ ಎಷ್ಟು ಜನ ಎಂಇಎಸ್ ಸದಸ್ಯರನ್ನು ಬಂಧಿಸಲಾಗಿದೆ ಎಂಬ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದ ಅವರು, ಸದನದಲ್ಲಿ ಈ ಬಗ್ಗೆ ಉತ್ತರ ನೀಡುವುದಾಗಿ ಗೃಹ ಸಚಿವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com