ರಾಜ್ಯದಲ್ಲಿಂದು ಕೊರೋನಾಗೆ ಐವರು ಬಲಿ; 295 ಹೊಸ ಪ್ರಕರಣ ಪತ್ತೆ; 290 ಸೋಂಕಿತರು ಗುಣಮುಖ

ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 295 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,02, 944ಕ್ಕೆ ಏರಿಕೆಯಾಗಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 295 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,02, 944ಕ್ಕೆ ಏರಿಕೆಯಾಗಿದೆ. 

290 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 29, 57, 546ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 7, 074 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿನಿಂದ ಇಂದು ಐವರು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಮೃತರ ಸಂಖ್ಯೆ 38,295ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇ.0.39 ರಷ್ಟಿದ್ದು, ಮರಣ ಪ್ರಮಾಣ ಶೇ. 1.69 ರಷ್ಟಿದೆ. 

ಬೆಂಗಳೂರಿನಲ್ಲಿ 204 ಹೊಸ ಪ್ರಕರಣ ಪತ್ತೆಯಾಗಿದ್ದು, 171 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಾವಿನ ಸಂಖ್ಯೆ ಶೂನ್ಯವಾಗಿದೆ. ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೀದರ್, ದಾವಣಗೆರೆ, ಗದಗ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com