ಪೊಲೀಸ್ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೂ ಅವಕಾಶ ನೀಡಿದ ಕರ್ನಾಟಕ

ಕರ್ನಾಟಕ ರಾಜ್ಯ ಪೊಲೀಸ್(ಕೆಎಸ್ ಪಿ) ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೂ ಅವಕಾಶ ನೀಡುವ ಮೂಲಕ ಸ್ವಾಗತಾರ್ಹ ಮತ್ತು ಪ್ರಗತಿಪರ ಹೆಜ್ಜೆ ಇಟ್ಟಿದ್ದು, ಕೆಎಸ್‌ಆರ್‌ಪಿ ಮತ್ತು ಭಾರತೀಯ ರಿಸರ್ವ್ ಬೆಟಾಲಿಯನ್ (ಐಆರ್‌ಬಿ) ವಿಶೇಷ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್(ಕೆಎಸ್ ಪಿ) ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೂ ಅವಕಾಶ ನೀಡುವ ಮೂಲಕ ಸ್ವಾಗತಾರ್ಹ ಮತ್ತು ಪ್ರಗತಿಪರ ಹೆಜ್ಜೆ ಇಟ್ಟಿದ್ದು, ಕೆಎಸ್‌ಆರ್‌ಪಿ ಮತ್ತು ಭಾರತೀಯ ರಿಸರ್ವ್ ಬೆಟಾಲಿಯನ್ (ಐಆರ್‌ಬಿ) ವಿಶೇಷ ಮೀಸಲು ಸಬ್‌ಇನ್‌ಸ್ಪೆಕ್ಟರ್ ಹುದ್ದೆಗೆ ಪುರುಷ, ಮಹಿಳೆಯರು ಮತ್ತು ತೃತೀಯ ಲಿಂಗಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. 

ಕಳೆದ ವರ್ಷ ನಗರದ ಎನ್‌ಜಿಒ ಮತ್ತು ಹಕ್ಕುಗಳ ಸಂಘ - ಸಂಗಮ ಹಾಗೂ ಸಾಮಾಜಿಕ ಕಾರ್ಯಕರ್ತೆ ನಿಶಾ ಗೂಳೂರ್ ಪರ ಹಿರಿಯ ವಕೀಲ ಬಿಟಿ ವೆಂಕಟೇಶ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯ ವಿಚಾರಣೆ ನಡೆಸಿದ್ದ ಹೈಕೋರ್ಟ್, "ಜುಲೈ 2021 ರಲ್ಲಿ ಎಲ್ಲಾ ವರ್ಗಗಳ ನೇಮಕಾತಿಯಲ್ಲಿ ಟ್ರಾನ್ಸ್‌ಜೆಂಡರ್‌ಗಳಿಗೆ ಶೇಕಡಾ ಒಂದರಷ್ಟು ಸಮತಲ ಮೀಸಲಾತಿ ನೀಡಬೇಕು ಎಂದು ಆದೇಶಿಸಿತ್ತು" ಎಂದು ವೆಂಕಟೇಶ್ ಅವರು ತಿಳಿಸಿದ್ದಾರೆ.

“ಕರ್ನಾಟಕ ಸರ್ಕಾರ ಪೊಲೀಸ್ ನೇಮಕಾತಿಯಲ್ಲಿ ಟ್ರಾನ್ಸ್‌ಜೆಂಡರ್‌ಗಳಿಗೆ ಸಮಾನ ಸ್ಥಾನಮಾನ ಘೋಷಿಸಿದೆ, ಇದು ದೇಶದಲ್ಲಿಯೇ ಮೊದಲ  ಹೆಜ್ಜೆಯಾಗಿದೆ ಮತ್ತು ತೃತೀಯ ಲಿಂಗಿಗಳಿಗೆ ಮೀಸಲಾತಿ ನೀಡುವಂತೆ ನ್ಯಾಯಾಲಯ ನೀಡಿರುವ ನಿರ್ದೇಶನ ಶ್ಲಾಘನೀಯ’ ಎಂದು ವೆಂಕಟೇಶ್ ಹೇಳಿದ್ದಾರೆ.

ತೃತೀಯಲಿಂಗಿ ಸಮುದಾಯದಿಂದ ಅರ್ಜಿಗಳನ್ನು ಆಹ್ವಾನಿಸಿದ ಕೆಎಸ್ ಪಿಯ ನಿರ್ಧಾರವನ್ನು ಸಂಗಮ ಸಂಘ ಸ್ವಾಗತಿಸಿದೆ ಮತ್ತು ಒಂದು ಸಂಘಟನೆಯಾಗಿ ಈ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಕ್ಕಾಗಿ ನಾವು ರಾಜ್ಯ ಪೊಲೀಸರಿಗೆ ಧನ್ಯವಾದ ಹೇಳುತ್ತೇವೆ ಎಂದು ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com